1:34 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

May Day | ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ

07/04/2025, 18:04

ಬೆಂಗಳೂರು(reporterkarnataka.com): ಮೇ 1ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಖಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.


ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ ಎಂದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಖಾಯಂ ಮಾಡಲಾಗುವುದು ಎಂದು ಸಿಎಂ ನುಡಿದರು.
*ವಾಹನ ಚಾಲಕರಿಗೂ ಖಾಯಂ:*
ಪೌರ ಕಾರ್ಮಿಕರ ಜೊತೆಗೆ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂ‌ ಮಾಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.
ಪೌರ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಬೇಕು. ವಿದ್ಯಾವಂತರಾದರೆ ಮಾತ್ರ ಸ್ವಾಭಿಮಾನಿಗಳಾಗಲು ಸಾಧ್ಯ. ಮಕ್ಕಳಿಗೆಲ್ಲಾ ಶಿಕ್ಷಣ ಕೊಡಿಸಿ. ಪ್ರತಿಯೊಬ್ಬರೂ ಪ್ರತಿಭಾವಂತರೇ. ಅವಕಾಶ ಸಿಗುವುದಷ್ಟೆ ಮುಖ್ಯ. ಅವಕಾಶ ಸಿಕ್ಕರೆ ಎಲ್ಲರೊಳಗಿನ ಪ್ರತಿಭೆ ಹೊರಗೆ ಬರುತ್ತದೆ ಎಂದರು.
*ನಗದು ರಹಿತ ಆರೋಗ್ಯ ಕಾರ್ಡ್:* ಪೌರ ಕಾರ್ಮಿಕ ಸಮುದಾಯಕ್ಕೆ ನಗದು ರಹಿತ ಆರೋಗ್ಯ ಕಾರ್ಡ್ ನೀಡಲಾಗುವುದು‌. ಕಾರ್ಮಿಕರ ಸಿಂಧುತ್ವದ ಸಮಸ್ಯೆ ಬಗೆಹರಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

*ಸಮುದಾಯಕ್ಕೆ ನಾರಾಯಣ್ ಅವರ ಕೊಡುಗೆ ದೊಡ್ಡದು: ಸಿಎಂ*
ಪೌರ ಕಾರ್ಮಿಕರ ಸಂಘಟನೆ ಮತ್ತು ಹೋರಾಟದಲ್ಲಿ ನಾರಾಯಣ್ ಅವರ ಪಾತ್ರ ದೊಡ್ಡದಿದೆ. ಪೌರ ಕಾರ್ಮಿಕ‌ ಸಮುದಾಯದಿಂದ ಬಂದು ಮೇಯರ್ ಆದವರಲ್ಲಿ ನಾರಾಯಣ್ ಅವರು ಮೊದಲಿಗರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನಾರಾಯಣ್ ಅವರು ಸರ್ಕಾರದ ಮುಂದೆ ಇಟ್ಟ ಪೌರ ಕಾರ್ಮಿಕರ ಸಮಸ್ಯೆಗಳಲ್ಲಿ ಹಲವನ್ನು ನಮ್ಮ ಸರ್ಕಾರ ಬಗೆಹರಿಸಿದೆ. ಪೌರ ಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದು ಪಡಿಸಿ ಪಾಲಿಕೆಗಳಿಂದಲೇ ಸಂಬಳ ಪಾವತಿಸುವ ವ್ಯವಸ್ಥೆ ಜಾರಿಗೆ ಮಾಡಿದ್ದು ನಮ್ಮ ಸರ್ಕಾರ. ಮೈಸೂರಿನಲ್ಲಿ 524 ಮನೆಗಳನ್ನು ಕೊಡಿಸುವಲ್ಲಿ, ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಕಲ್ಪಿಸಿ ಒಂದು ಮನೆಗೆ 6.5 ಲಕ್ಷ ರೂಪಾಯಿ ಹಣ ಕೊಡ್ತಾ ಇರುವುದು ನಮ್ಮ ಸರ್ಕಾರ ಮಾತ್ರ ಎಂದರು.
ಪೌರ ಕಾರ್ಮಿಕರ ಸಂಬಳವನ್ನು 7 ಸಾವಿರದಿಂದ 17 ಸಾವಿರಕ್ಕೆ ಏರಿಸಿದ್ದು ಇದೇ ಸಿದ್ದರಾಮಯ್ಯ ಎಂದರು.
ನೀವೆಲ್ಲಾ ಈಗ ಕಷ್ಟ ಪಟ್ಟು ಶುಚಿತ್ವದ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಮಕ್ಕಳೂ ಇದೇ ಕೆಲಸ ಮಾಡಬಾರದು. ನಿಮ್ಮ ಮಕ್ಕಳು ಇತರೆ ಕೆಲಸಗಳಿಗೆ ಹೋಗಬೇಕು. ಆ ರೀತಿ ನೀವು ಬೆಳೆಯಬೇಕು. ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.
ಪ್ರತೀ ವರ್ಷ ಒಂದು ಸಾವಿರ ಪೌರ ಕಾರ್ಮಿಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಪೌರ ಕಾರ್ಮಿಕ ಸಮುದಾಯವೂ ವಿಶ್ವ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು