5:31 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

MCC | ಕಾಂಗ್ರೆಸ್ ಆಡಳಿತದ ನಿರ್ಲಕ್ಷ್ಯಕ್ಕೆ ಮಂಗಳೂರು ಜನತೆಗೆ ಸಂಕಷ್ಟ: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

12/04/2025, 10:41

ಮಂಗಳೂರು(reporterkarnataka.com):ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಾಜಕಾಲುವೆಗಳಲ್ಲಿ ಹಾಗೂ ಚರಂಡಿಗಳಲ್ಲಿ ಹೂಳೆತ್ತುವುದು ಸೇರಿದಂತೆ ಮುಂಬರುವ ಮಳೆಗಾಲಕ್ಕೆ ಯಾವುದೇ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳದಿರುವುದನ್ನು ಖಂಡಿಸಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಬಿಜೆಪಿಯ ನಿಕಟ ಪೂರ್ವ ಪಾಲಿಕೆ ಸದಸ್ಯರುಗಳು ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿ ತುರ್ತು ಕ್ರಮಕ್ಕೆ ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಶಾಸಕರು, ಪಾಲಿಕೆಯಲ್ಲಿ ಬಿಜೆಪಿ ಆಡಳಿತದಲ್ಲಿದ್ದಾಗ ಮಾರ್ಚ್ ಅಂತ್ಯದ ವೇಳೆಗೆ ರಾಜಕಾಲುವೆಗಳಲ್ಲಿ ಹಾಗೂ ಚರಂಡಿಗಳಲ್ಲಿ ಹೂಳೆತ್ತುವುದು ಸೇರಿದಂತೆ ಮಳೆಗಾಲದ ಪೂರ್ವ ಸಿದ್ಧತೆಗಳ ಕುರಿತು ಕಾರ್ಯ ಚಟುವಟಿಕೆಗಳು ಆರಂಭವಾಗುತ್ತಿದ್ದವು. ಆದರೆ ಪ್ರಸ್ತುತ ಪಾಲಿಕೆಯಲ್ಲಿ ಬಿಜೆಪಿಯ ಅವಧಿಯು ಮುಗಿದ ಪರಿಣಾಮ ರಾಜ್ಯ ಕಾಂಗ್ರೆಸ್ ಸರ್ಕಾರದ ಅಧೀನದಲ್ಲಿರುವ ಜಿಲ್ಲಾಡಳಿತ ಹಾಗೂ ಪಾಲಿಕೆ ಅಧಿಕಾರಿಗಳ ಆಡಳಿತ ನಡೆಯುತ್ತಿದ್ದು, ಏಪ್ರಿಲ್ ತಿಂಗಳ ಮಧ್ಯಭಾಗಕ್ಕೆ ಬಂದರೂ ಯಾವುದೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೆತ್ತಿಕೊಂಡಿಲ್ಲ. ಇದೇ ಕಾರಣಕ್ಕೆ ಇತ್ತೀಚಿಗೆ ಸುರಿದ ಸಣ್ಣ ಮಳೆಗೂ ರಾಜಕಾಲುವೆ ನೀರು ಮನೆಗೆ ನುಗ್ಗಿದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ಜಿಲ್ಲಾ ಉಸ್ತುವಾರಿ ಸಚಿವರು ರಾಜಕಾಲುವೆ ಹಾಗೂ ಚರಂಡಿಗಳ ಹೂಳೆತ್ತುವಿಕೆ, ನಗರ ಭಾಗದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ, ಮರಗಳ ಅಪಾಯಕಾರಿ ಗೆಲ್ಲುಗಳನ್ನು ತೆರವುಗೊಳಿಸುವುದು, ನಗರದೆಲ್ಲೆಡೆ ವಿಪರೀತವಾಗಿರುವ ಕಸದ ಸಮಸ್ಯೆಗಳ ಬಗ್ಗೆ ಕನಿಷ್ಠ ಒಮ್ಮೆಯಾದರೂ ಪಾಲಿಕೆ ಅಧಿಕಾರಿಗಳ ಸಭೆ ನಡೆಸಬೇಕಿತ್ತು. ಆದರೆ ಆ ಬಗ್ಗೆ ಚಿಂತನೆಯೇ ಅವರಲ್ಲಿ ಇಲ್ಲವಾದ ಮೇಲೆ ಅಧಿಕಾರಿಗಳು ಕೂಡಾ ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ. ಹಾಗಾಗಿ ಮಂಗಳೂರಿನ ಜನತೆ ತೀವ್ರ ತೊಂದರೆ ಅನುಭವಿಸುವಂತಾಗಿದೆ. ಇದು ರಾಜ್ಯ ಕಾಂಗ್ರೆಸ್ ಸರ್ಕಾರವು ಉದ್ದೇಶಪೂರ್ವಕವಾಗಿ ನಮ್ಮ ಜಿಲ್ಲೆ ಹಾಗೂ ಮಂಗಳೂರು ಮಹಾನಗರ ಪಾಲಿಕೆಯನ್ನು ಹೇಗೆ ಕಡೆಗಣಿಸುತ್ತಿದೆ ಎಂಬುದರ ಸತ್ಯ ದರ್ಶನವಾಗಿದೆ. ಮಂಗಳೂರಿನ ಜನತೆಯ ಸಮಸ್ಯೆಗೆ ಬಿಜೆಪಿಯು ಧ್ವನಿಯಾಗಿದ್ದು ಮುಂದಿನ ನಾಲ್ಕೈದು ದಿನಗಳಲ್ಲಿ ಪಾಲಿಕೆ ಅಧಿಕಾರಿಗಳ ಹಾಗೂ ಬಿಜೆಪಿಯ ನಿಕಟ ಪೂರ್ವ ಪಾಲಿಕೆ ಸದಸ್ಯರುಗಳ ಸಭೆಯನ್ನು ನಡೆಸುತ್ತೇವೆ ಎಂದು ಹೇಳಿದ ಶಾಸಕರು ಕೂಡಲೇ ಸರ್ಕಾರವು ಈ ಬಗ್ಗೆ ಗಮನ ಹರಿಸಬೇಕೆಂದು ಆಗ್ರಹಿಸಿದರು.
ಮಾಜಿ ಮೇಯರ್ ಗಳಾದ ದಿವಾಕರ್ ಪಾಂಡೇಶ್ವರ, ಪ್ರೇಮಾನಂದ ಶೆಟ್ಟಿ, ನಿಕಟ ಪೂರ್ವ ಪಾಲಿಕೆ ಸದಸ್ಯರುಗಳಾದ ಪೂರ್ಣಿಮಾ, ಗಣೇಶ್ ಕುಲಾಲ್, ಭರತ್ ಕುಮಾರ್, ಮನೋಹರ್ ಕದ್ರಿ, ಜಗದೀಶ್ ಶೆಟ್ಟಿ, ಸಂದೀಪ್ ಗರೋಡಿ, ಶೈಲೇಶ್ ಶೆಟ್ಟಿ, ಕಿಶೋರ್ ಕೊಟ್ಟಾರಿ, ರೇವತಿ ಶ್ಯಾಮ್ ಸುಂದರ್, ರೂಪಶ್ರೀ, ಲೀಲಾವತಿ ಪ್ರಕಾಶ್, ಜಯಶ್ರೀ ಕುಡ್ವ, ಜಯಲಕ್ಷ್ಮಿ ಶೆಟ್ಟಿ, ವೀಣಾ ಮಂಗಳ, ವನಿತಾ ಪ್ರಸಾದ್, ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು