10:03 PM Thursday6 - March 2025
ಬ್ರೇಕಿಂಗ್ ನ್ಯೂಸ್
BJP v/s Cong | ಉದ್ದೇಶಿತ ಕ್ಷೇತ್ರ ಮರು ವಿಂಗಡಣೆ ದಕ್ಷಿಣ ಭಾರತದ… Womens Day | ಮಹಿಳಾಸ್ನೇಹಿ ಗ್ರಾಪಂ ಅಭಿಯಾನ, ಮಹಿಳಾ ಗ್ರಾಮಸಭೆ: ಮಾರ್ಚ್‌ 8… Protest | ಹಕ್ಕುಪತ್ರಕ್ಕಾಗಿ ಪಾದಯಾತ್ರೆ: ಗ್ರಾಮದ ನ್ಯಾಯಕ್ಕಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ಏಕಾಂಗಿ… Budget Session | 26 ಲಕ್ಷ ನಕಲಿ ಕಾರ್ಡ್ ಗಳ ರದ್ದು: ಸದನದಲ್ಲಿ… Budget Session | ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ಸಮಿತಿ… Forest Minister | ವಾಯುಪಡೆ ಸ್ವಾಧೀನದ ಪೀಣ್ಯ, ಜಾರಕಬಂಡೆ ಅರಣ್ಯಭೂಮಿ ಮರುವಶಕ್ಕೆ: ಸಚಿವ… Budget Session | ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಎಲ್ಲ… Yakshagana | ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಅನುಮತಿ ಸರಳಗೊಳಿಸಲಾಗುವುದು: ಡಿಸಿಎಂ ಡಿ.ಕೆ.ಶಿವಕುಮಾರ್ Budget Session | ಅನಿಲ ವಿತರಣೆ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗತ್ಯ ಕ್ರಮ: ಸಚಿವ… Budget Session | ಸ್ಮಾರ್ಟ್ ಸಿಟಿ ಯೋಜನೆ ಅವ್ಯವಹಾರಗಳ ಬಗ್ಗೆ ಅಗತ್ಯ ಕ್ರಮ:…

ಇತ್ತೀಚಿನ ಸುದ್ದಿ

Budget Session | ಅಕ್ರಮ ಮಧ್ಯ ಮಾರಾಟ ತಡೆಗೆ ಕ್ರಮ: ಸಚಿವ ಎಚ್.ಕೆ.ಪಾಟೀಲ್ ಭರವಸೆ

04/03/2025, 21:11

ಬೆಂಗಳೂರು(reporterkarnataka.com): ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ತಡೆಗಟ್ಟಲು ಅಬಕಾರಿ ಇಲಾಖೆಯಿಂದ ವಲಯ ವ್ಯಾಪ್ತಿಯ ರೂಟ್‍ಗಳಲ್ಲಿ ನಿರಂತರವಾಗಿ ಗಸ್ತು ನಡೆಸಲಾಗುತ್ತಿದೆ. ಗಸ್ತಿನ ಸಮಯದಲ್ಲಿ ಮತ್ತು ಸಾರ್ವಜನಿಕರಿಂದ ವಿಶೇಷವಾಗಿ ಮಹಿಳೆ / ಮಹಿಳಾ ಸಂಘಗಳಿಂದ ದೂರುಗಳು ಸ್ವೀಕೃತವಾದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಸ್ಥಳಗಳ ಮೇಲೆ ದಾಳಿ ನಡೆಸಿ, ಅಕ್ರಮಗಳು ಕಂಡುಬಂದಲ್ಲಿ ಅಬಕಾರಿ ಕಾಯ್ದೆ ಮತ್ತು ನಿಯಮಗಳನುಸಾರ ಪ್ರಕರಣಗಳನ್ನು ದಾಖಲಿಸಿ ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮ ವಹಿಸಲಾಗುತ್ತಿದೆ ಎಂದು ವಿಧಾನಸಭೆಯಲ್ಲಿ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಹೇಳಿದರು.
ಇಂದು ವಿಧಾನಸಭೆಯಲ್ಲಿ ಬೈಲಹೊಂಗಲ ಶಾಸಕರಾದ ಕೌಜಲಗಿ ಮಹಾಂತೇಶ್ ಶಿವಾನಂದ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಲ್ಲಾ ಮದ್ಯ ಮಾರಾಟ ಸನ್ನದುಗಳನ್ನು ನಿಯಮಿತವಾಗಿ ಮಾಸಿಕವಾಗಿ ಪರಿಶೀಲಿಸಲಾಗುತ್ತಿದ್ದು ಕಾಯ್ದೆ/ನಿಯಮ/ಸನ್ನದು ಷರತ್ತು ಉಲ್ಲಂಘನೆಯಾದಲ್ಲಿ ಅಂತಹ ಸನ್ನದುದಾರರ ವಿರುದ್ಧ ಅಬಕಾರಿ ಕಾಯ್ದೆ ಪ್ರಕರಣ ದಾಖಲಿಸಲಾಗುತ್ತಿದ್ದು, ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಯಮಿತವಾಗಿ ರಸ್ತೆಗಾವಲು ನಡೆಸಿ ಸಂಶಯಾಸ್ಪದ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಅಲ್ಲದೇ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಥಾಯಿ ಸಮಿತಿ ಸಭೆಯನ್ನು ಏರ್ಪಡಿಸಿ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಕ್ರಮ ಅತ್ತಿಕ್ಕಲು ಕ್ರಮ ವಹಿಸಲು ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಸಂರಕ್ಷಣಾಧಿಕಾರಿಗಳೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಗ್ರಾಮ ಸಭೆಗಳಲ್ಲಿ ಮತ್ತು ವಿದ್ಯಾರ್ಥಿಗಳಿಗೆ ಶಾಲಾ/ಕಾಲೇಜುಗಳಲ್ಲಿ ಮದ್ಯ ವ್ಯಸನ ಮತ್ತು ಮಾದಕ ವಸ್ತುಗಳ ಸೇವನೆಯಿಂದ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಆರೋಗ್ಯಕ್ಕೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಕ್ರಮ ವಹಿಸಲಾಗಿದೆ. ಅಲ್ಲದೇ 2024-25ನೇ ಸಾಲಿನ ಜನವರಿ ಅಂತ್ಯದವರೆಗೆ 17,390 ಮೊಕದ್ದಮೆಗಳನ್ನು ದಾಖಲಿಸಿ ಅದೇ ಅವಧಿಯಲ್ಲಿ 18,253 ಆರೋಪಿತರನ್ನು ದಸ್ತಗಿರಿಗೊಳಪಡಿಸಲಾಗಿರುತ್ತದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ವಿಧಾನಸಭೆಯಲ್ಲಿ ಉತ್ತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು