12:26 PM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಮೀನುಪ್ರಿಯರಿಗೆ ಕಹಿ ಸುದ್ದಿ: ಕರಾವಳಿಯಲ್ಲಿ ಜೂನ್ 1ರಿಂದ 61 ದಿನಗಳ ಕಾಲ ನೋ ಫಿಶಿಂಗ್

26/05/2023, 12:05

ಮಂಗಳೂರು(reporterkarnataka.com): ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1ರಿಂದ ಜುಲೈ 31ರ ವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನ ನಿಷೇಧಿಸಲಾಗಿದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮಥ್ರ್ಯದ ಮೋಟಾರೀಕೃತ ಎಂಜಿನ್ ಹಾಗೂ ಸಾಂಪ್ರದಾಯಿಕ ಮತ್ತು ನಾಡದೋಣಿಗಳಲ್ಲಿ ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.
ಮೀನುಗಾರಿಕೆ ನಿಷೇಧಿಸಿದ ಸರ್ಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ.
ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೊರಡಿಸಿರುವುದರಿಂದ ಎಲ್ಲಾ ಮೀನುಗಾರರು ಈ ಆದೇಶವನ್ನು ಪಾಲಿಸಿ ಸರ್ಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು