5:00 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಮೀನು ವ್ಯಾಪಾರಿಯ ಕಿಡ್ನಾಪ್: 15 ಲಕ್ಷ ರೂ. ಬೇಡಿಕೆ; ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು

03/10/2021, 23:48

ಮಲ್ಪೆ(reporterkarnataka.com):  ಮೀನು ವ್ಯಾಪಾರಿಯೊಬ್ಬರನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಸಾಧೀಕ್ ಎಂಬವವರು ಈ ಕುರಿತು ದೂರು ನೀಡಿದ್ದಾರೆ.

ಚಿಕ್ಕಮಗಳೂರಿನ ಕೊಪ್ಪದಿಂದ ತನ್ನ ತಮ್ಮ ಸುಲೈಮಾನ್  ಮೀನು ಲಾರಿಯ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಸೆ.30ರಂದು ಬೆಳಗ್ಗೆ 9.00 ಗಂಟೆಗೆ ಕೊಪ್ಪದ ಮನೆಯಿಂದ ಮಲ್ಪೆಗೆ ಮೀನು ಲಾರಿಯ ಚಾಲಕ ಕೆಲಸಕ್ಕೆ ಬಂದಿದ್ದ. ಅ.1ರಂದು ತನ್ನ ಇನ್ನೊಬ್ಬ ತಮ್ಮ ಶಂಶುದ್ದೀನ್ ಎಂಬಾತ ಸುಲೈಮಾನ್ ಗೆ ಕರೆ ಮಾಡಿದಾಗ ಪೋನ್ ಕರೆ ಸ್ವೀಕರಿಸಲಿಲ್ಲ. ಸೆ.2ರಂದು ಬೆಳಗ್ಗೆ 9.00 ಗಂಟೆಗೆ ಸುಲೈಮಾನ್ ನ ಮೊಬೈಲ್ ನಂಬ್ರದಿಂದ ಶಂಶುದ್ದೀನ್ ಗೆ ಕರೆ ಬಂತು. ಆ ಕಡೆಯಿಂದ ಸಮೀರ್ ಎಂಬವನು ಮಾತನಾಡಿ, ಸುಲೈಮಾನ್ ನಮ್ಮ ಜೊತೆಗೆ ಇದ್ದಾನೆ. ಆತನನ್ನು ಬಿಡಬೇಕಾದರೆ ನಮಗೆ 15 ಲಕ್ಷ ಹಣ ಕೊಡಬೇಕು. ಆತನನ್ನು ನಾವು ಸೆ.1ರಂದು ಮಲ್ಪೆಯಿಂದ ಅಪಹರಣ ಮಾಡಿದ್ದೇವೆ ಎಂದು ಹೇಳಿದ್ದನು. ನಂತರ ನಾವು ಮಲ್ಪೆಗೆ ಬಂದು ತಮ್ಮ ಸುಲೈಮಾನ್ ಬಗ್ಗೆ ವಿಚಾರಿಸಿದಾಗ ಸುಲೈಮಾನ್ ಮೀನು ಲಾರಿ ಚಾಲಕ ಕೆಲಸದ  ಜೊತೆಗೆ ಮೀನನ್ನು ಮಲ್ಪೆಯಲ್ಲಿ ತೆಗೆದುಕೊಂಡು ಕೇರಳಕ್ಕೆ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿದರು.

ನಂತರ ಸುಲೈಮಾನ್ ಮೊಬೈಲಿಗೆ ಕರೆ ಮಾಡಿದಾಗ ಆಕರೆಯನ್ನು ಸಮೀರ್ ಎಂಬವನು ಸ್ವೀಕರಿಸಿ, ನಮಗೆ ಸುಲೈಮಾನ್ ಮೀನು ವ್ಯವಹಾರದಲ್ಲಿ 15 ಲಕ್ಷ ಹಣ ಕೊಡಬೇಕು. ಆ ಕಾರಣದಿಂದ ಅವನನ್ನು ಕೇರಳದ ಹನಸ್ ಮತ್ತು ಅವರ ಸಹೋದರರು ಅಪಹರಣ ಮಾಡಿರುತ್ತಾರೆ. ನೀವು ಬಂದು 15 ಲಕ್ಷ ಹಣ ಕೊಟ್ಟು ಕರೆದುಕೊಂಡು ಹೋಗಿ. ಇಲ್ಲದಿದ್ದರೆ ಆತನನ್ನು ಕೊಂದು ಸಮುದ್ರಕ್ಕೆ ಬಿಸಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಸಾದಿಕ್ ಮಲ್ಪೆ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು  ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು