8:48 PM Friday23 - January 2026
ಬ್ರೇಕಿಂಗ್ ನ್ಯೂಸ್
ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು

ಇತ್ತೀಚಿನ ಸುದ್ದಿ

ಮೆಗಾ ಲೋಕ ಅದಾಲತ್: 5,234 ಪ್ರಕರಣಗಳು ಇತ್ಯರ್ಥ; 14.16 ಕೋಟಿ ರೂ. ಪರಿಹಾರ

19/08/2021, 08:47

ಮಂಗಳೂರು (reporterkarnataka.com): ಜಿಲ್ಲೆಯ ನ್ಯಾಯಾಲಯಗಳಲ್ಲಿ ಮೆಗಾ ಲೋಕ್ ಅದಾಲತ್ ಕಾರ್ಯಕ್ರಮ ನಡೆದಿದ್ದು, ಅದಾಲತ್‍ನಲ್ಲಿ ಒಟ್ಟು 11,163 ಪ್ರಕರಣಗಳು ವಿಚಾರಣೆಗೆ ಬಂದಿದ್ದು, ಅವುಗಳಲ್ಲಿ 5,234 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. 14.16 ಕೋಟಿ ರೂ.ಗಳ ಪರಿಹಾರವನ್ನು ಸಂಬಂಧ ಪಟ್ಟವರಿಗೆ ನೀಡಲಾಗಿದೆ.

ಮೆಗಾ ಲೋಕ ಅದಾಲತ್‍ನಲ್ಲಿ ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು, ಆಸ್ತಿ ಸಂಬಂಧಿತ ಪ್ರಕರಣಗಳು, ಕಂದಾಯ ಇಲಾಖೆ ಸಂಬಂಧಿಸಿದ ಪ್ರಕರಣಗಳು, ಜನನ-ಮರಣ ನೋಂದಣಿ ಪ್ರಕರಣಗಳು, ಕಾರ್ಮಿಕ ಸಂಬಂಧಿತ ವಿವಾದಗಳು, ಚೆಕ್ ಬೌನ್ಸ್ ಪ್ರಕರಣಗಳು, ಹಣ ವಸೂಲಾತಿ ಪ್ರಕರಣಗಳು, ಎಂಎಂಡಿಆರ್ ಕಾಯ್ದೆ ಪ್ರಕರಣ ಹಾಗೂ ಸಿವಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು