11:48 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮೇಕೆದಾಟು ಕಾಂಗ್ರೆಸ್ ಪಾದಯಾತ್ರೆ ಬಿಜೆಪಿ ಸರಕಾರ ವಿರುದ್ಧ ಹೆಣೆದ ರಾಜಕೀಯ ಷಡ್ಯಂತ್ರ: ಶಾಸಕ ವೇದವ್ಯಾಸ ಕಾಮತ್

14/01/2022, 20:58

ಮಂಗಳೂರು(reporterkarnataka.com): ಮೇಕೆದಾಟು ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಏರ್ಪಡಿಸಿದ ಪಾದಯಾತ್ರೆ ಸಂಪೂರ್ಣ ರಾಜಕೀಯ ಗಿಮಿಕ್ ಆಗಿದ್ದು, ರಾಜ್ಯ ಸರಕಾರಕ್ಕೆ ಕೆಟ್ಟ ಹೆಸರು ತರಲು ಕಾಂಗ್ರೆಸಿಗರು ಹೆಣೆದ ಷಡ್ಯಂತ್ರದ ಭಾಗ ಇದು ಎಂದು ಶಾಸಕ ಡಿ.ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ.

ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಹೋರಾಟ ನಡೆಸಿ ರಾಜ್ಯದ ಜನತೆಯನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನವನ್ನು ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ತಂಡ ನ್ಯಾಯಾಂಗ ವ್ಯವಸ್ಥೆಗೆ ಗೌರವ ಕೊಟ್ಟು ಮುಂದುವರಿಯಬೇಕಿತ್ತು. ಆದರೆ ಇದು ಗೊತ್ತಿದ್ದು ಪಾದಯಾತ್ರೆ ನಡೆಸಿ ನ್ಯಾಯಾಂಗ ವ್ಯವಸ್ಥೆಗೆ ಅಗೌರವ ತೋರಿ ಗೊಂದಲ ಸೃಷ್ಟಿಗೆ ಕಾರಣರಾಗಿದ್ದಾರೆ. ಇದಕ್ಕೆ ನಾಡಿನ ಜನರು ಕಾಂಗ್ರೆಸಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ರಾಜಧಾನಿ ಬೆಂಗಳೂರು ಹಾಗೂ ಇತರೆಡೆಗೆ ಅಗತ್ಯವಾಗಿ ಬೇಕಾಗಿರುವ ಕುಡಿಯುವ ನೀರನ್ನು ಒದಗಿಸಿ ಕೊಡುವುದು ರಾಜ್ಯ ಸರಕಾರದ ಜವಾಬ್ದಾರಿ. ಅದನ್ನು ಮಾಡಿಸಲು ನಮ್ಮ ಸರಕಾರ ಬದ್ಧವಾಗಿದೆ. ಮೇಕೆದಾಟು ವಿಚಾರವಾಗಿ ತಮಿಳುನಾಡು ಸರಕಾರ ನ್ಯಾಯಾಲಯದ ಮೆಟ್ಟಿಲೇರಿರುವುದರಿಂದ ಯೋಜನೆ ಜಾರಿಗೆ ತೊಡಕಾಗಿದೆ. ಸಾಧ್ಯವಾದರೆ ಡಿಕೆಶಿ ಮತ್ತವರ ಬಳಗ ತಮಿಳುನಾಡಿಗೆ ಹೋಗಿ ಅಲ್ಲಿನ ಸರಕಾರವನ್ನು ಮನವೊಲಿಸುವ ಕೆಲಸ ಮಾಡಲಿ. ಅದು ಬಿಟ್ಟು ತಮ್ಮ ರಾಜಕೀಯ ಬೇಳೆ ಬೇಯಿಸುವುದಕ್ಕೋಸ್ಕರ ರಾಜ್ಯದ ಜನತೆಯನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ ಮಾಡಬೇಡಿ ಎಂದು ಕಿವಿ ಮಾತು ಹೇಳಿದರು.

ರಾಜ್ಯದಲ್ಲಿ ಕೋವಿಡ್ 19 ಸೋಂಕು ಮೂರನೇ ಅಲೆ ಉಲ್ಭಣಿಸುತ್ತಿರುವ ಸಂದರ್ಭದಲ್ಲಿ ಪಾದಯಾತ್ರೆ ನಡೆಸಿ ಸೋಂಕು ಹೆಚ್ಚಳಕ್ಕೆ ಕಾಂಗ್ರೆಸಿಗರು ನೇರ ಕಾರಣರಾಗಿದ್ದಾರೆ. ಯಾತ್ರೆ ನಡೆಸದಂತೆ ಎಲ್ಲ ಕಡೆಯಿಂದ ಒತ್ತಡ ಇದ್ದರೂ ಅದನ್ನು ಲೆಕ್ಕಿಸದೆ ಮುಂದುವರಿದಿರುವುದು ಅವರಿಗೆ ಈ ನಾಡಿನ ಜನರ ಆರೋಗ್ಯದ ಬಗ್ಗೆ ಇರುವ ಕಾಳಜಿಯನ್ನು ತೋರಿಸುತ್ತದೆ. ಇನ್ನಾದರೂ ಕಾಂಗ್ರೆಸಿಗರು ಮೇಕೆದಾಟು ವಿಚಾರದಲ್ಲಿ ನ್ಯಾಯಾಂಗ ವ್ಯವಸ್ಥೆಯನ್ನು ಗೌರವಿಸಿ ರಾಜ್ಯ ಸರಕಾರದೊಂದಿಗೆ ಸಹಕರಿಸಲಿ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು