10:20 PM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಮೇಕೇರಿ ದೇವಸ್ಥಾನದಲ್ಲಿ ಸಂಭ್ರಮ- ಸಡಗರದ ಶಿವರಾತ್ರಿ ಮಹೋತ್ಸವ: ಶಂಖನಾದದೊಂದಿಗೆ ಹೊರೆ ಕಾಣಿಕೆ ಸಮರ್ಪಣೆ

20/02/2023, 01:04

ಮಡಿಕೇರಿ(reporterkarnataka.com): ಇಲ್ಲಿಗೆ ಸಮೀಪದ ಮೇಕೇರಿ ಗ್ರಾಮದ ಶ್ರೀ ಗೌರೀಶಂಕರ ದೇವಾಲಯದಲ್ಲಿ ಶನಿವಾರ ಶಿವರಾತ್ರಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ಶನಿವಾರ ಬೆಳಗ್ಗೆ ಗ್ರಾಮದ ಸುಭಾಶ್ ನಗರ, ಕಾವೇರಿಬಡಾವಣೆ, ಶಕ್ತಿನಗರ, ಬಿಳಿಗೇರಿ ಜಂಕ್ಷನ್ ನ್ ಹೀಗೆ ನಾಲ್ಕು ದಿಕ್ಕುಗಳಿಂದ ಚಂಡೆ, ವಾದ್ಯ, ಶಂಖನಾದದೊಂದಿಗೆ ಏಕಕಾಲಕ್ಕೆ ಹೊರೆಕಾಣಿಕೆಯನ್ನು ದೇವಾಲಯಕ್ಕೆ ತಂದು ಶಿವಾರ್ಪಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಉಷಾಪೇಜೆ, ಮಾಹಾ ಮೃತ್ಯುಂಜಯ ಹೋಮ, ರುದ್ರಾಭಿಷೇಕ, ಮಹಾಪೂಜೆ ನಡೆದು ಮಧ್ಯಾಹ್ನ ಅನ್ಮ ಸಂತರ್ಪಣೆ ನಡೆಯಿತು.
ಶನಿವಾರ ರಾತ್ರಿ ಶಾಸಕ ಕೆ.ಜಿ.ಬೋಪಯ್ಯ ಅವರು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.


ಸಾಂಸ್ಕ್ರತಿಕ ಕಾರ್ಯಕ್ರಮ: ಶಿವರಾತ್ರಿ ಪ್ರಯುಕ್ತ ಶ್ರೀ ಗೌರೀಶಂಕರ ಕಲಾ ವೇದಿಕೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮದ ಮಕ್ಕಳಿಂದ ಮತ್ತು ಮೂರ್ನಾಡಿನ ಭಾರತೀಯ ನೃತ್ಯಶಾಲೆಯ ತಂಡದ ನೃತ್ಯಗಳು ಸಭಿಕರ ಮನಸೂರೆಗೊಂಡವು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಜಿತಿನ್ ನಿರೂಪಿಸಿದರು.
ನಂತರ ರಾತ್ರಿ ಶಿವರಾತ್ರಿ ಜಾಗರಣೆಗಾಗಿ ಸುಳ್ಯದ ಯುವಕ ಯಕ್ಷಗಾನ ಕಲಾರಂಗದಿಂದ ಯಕ್ಷ-ಗಾನ-ನಾಟ್ಯ-ವೈಭವ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು