6:35 PM Saturday2 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

ಮೇಕೇರಿಯಲ್ಲಿ ರಕ್ತದಾನ ಶಿಬಿರ: 50ನೇ ಬಾರಿ ರಕ್ತದಾನ ಮಾಡಿದ ಪೊಲೀಸ್ ರಾಮಪ್ಪ ಅವರಿಗೆ ಸನ್ಮಾನ

30/12/2023, 17:40

ಮಡಿಕೇರಿ(reporterkarnataka.com): ಇಲ್ಲಿಗೆ ಸಮೀಪದ ಮೇಕೇರಿಯ ಸ್ವಾಗತ ಯುವಕ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಉತ್ತಮ ಆಡಳಿತ ದಿನದ ಪ್ರಯುಕ್ತ ವರ್ಷದ ಗ್ರಾಮೀಣ ಮಟ್ಟದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಡಿಸೆಂಬರ್ 29ರಂದು ಆಯೋಜಿಸಲಾಗಿತ್ತು.
ಮೇಕೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಅತಿಥಿಗಳು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸುಂದರ್‌ರಾಜ್ ಪಾಲ್ಗೊಂಡಿದ್ದರು. ಇದೇ ಸಂದರ್ಭ 50ನೇ ಬಾರಿಗೆ ರಕ್ತದಾನ ಮಾಡಿದ ಕೊಡಗು ಜಿಲ್ಲಾ ಪೊಲೀಸ್ ಸಿಬ್ಬಂದಿ ಬಿ.ಎಂ ರಾಮಪ್ಪ, ಎಲ್‌ಎಲ್‌ಬಿ ಪದವಿ ಪೂರೈಸಿದ ಗ್ರಾಮದ ಪದವಿದರರಾದ ಪಿ.ಆರ್. ಪ್ರಜೀತ ರಾಜನ್, ವಿ.ಬಿ. ಹರ್ಷಿತಾ, ಸಿ.ವೈ. ಲಿಖಿತ್ ಹಾಗೂ 1974ರಲ್ಲಿ ಮೇಕೇರಿ ಗ್ರಾಮದಲ್ಲಿ ಸ್ವಾಗತ ಯುವಕ ಸಂಘವನ್ನು ಸ್ಥಾಪಿಸಿದ ಸ್ವಾಗತ ಯುವಕ ಸಂಘದ ಸ್ಥಾಪಕ ಅಧ್ಯಕ್ಷ ಓಡಿಯಾನ ಉಲ್ಲಾಸ್ ಅವರನ್ನು ಸ್ವಾಗತ ಯುವಕ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
50ನೇ ಬಾರಿಗೆ ರಕ್ತದಾನ ಮಾಡಿದ ಪೊಲೀಸ್ ಸಿಬ್ಬಂದಿ ಬಿ.ಎಂ ರಾಮಪ್ಪ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ ನಮ್ಮ ಊರಿನಲ್ಲೇ 50ನೇ ಬಾರಿಗೆ ರಕ್ತದಾನ ಮಾಡಲು ಅವಕಾಶ ಸಿಕ್ಕಿರುವುದು ಸಂತಸ ತಂದಿದೆ ಎಂದರು. ರಕ್ತದಾನ ಮಾಡುವುದರಿಂದ ತುರ್ತು ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಇರುವವರಿಗೆ ಅನುಕೂಲವಾಗುತ್ತದೆ. ಅಲ್ಲದೆ ರಕ್ತದಾನ ಮಾಡುವುದರಿಂದ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳು ಬರುವುದಿಲ್ಲ ಎಂದರಲ್ಲದೇ ಮದುಮೇಹ ಮತ್ತು ಬೊಜ್ಜು ಕರಗುವಿಕೆಗೆ ರಕ್ತದಾನ ಮಾಡುವುದರಿಂದ ಸಹಕಾರಿಯಾಗುತ್ತದೆ ಎಂದರು.
ಇದೇ ಸಂದರ್ಭ ಗ್ರಾಮದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಮತ್ತು ಅವರ ಅವಲಂಬಿತರಿಗೆ ಕಾರ್ಮಿಕ ಇಲಾಖೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಡ್ ನೋಂದಾವಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಟ್ಟಡ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು.
ಈ ಸಂದರ್ಭ ರಕ್ತದಾನದ ಮಹತ್ವದ ಬಗ್ಗೆ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಡಾ. ಕರುಂಬಯ್ಯ, ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಕಾರ್ಮಿಕ ಅಧಿಕಾರಿ ಯತ್ನಿಟ, ವಿಶ್ವಕರ್ಮ ಕಾರ್ಡ್ ನೊಂದಾವಣೆ ಮತ್ತು ಅದರ ಪ್ರಯೋಜನಗಳ ಬಗ್ಗೆ ಕೈಗಾರಿಕಾ ಇಲಾಖೆಯ ಉಪನಿರ್ದೇಶಕ ಸಿ.ಎನ್ ರಘು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ ಸುಕುಮಾರ್ ಮಾತನಾಡಿದರು.
ವೇದಿಕೆಯಲ್ಲಿ ಗೌರಿ ಶಂಕರ ದೇವಾಲಯ ಸಮಿತಿ ಅಧ್ಯಕ್ಷರಾದ ಕೆ.ಕೆ. ಪೂರ್ಣಯ್ಯ, ಮೇಕೇರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶುಭಾ ಭರತ್, ಗ್ರಾ.ಪಂ ಸದಸ್ಯರಾದ ಕೆ.ಎನ್ ಕೀರ್ತನ್, ಎಂ.ಯು ಹನೀಫ್, ಸುಶೀಲಾ ಮಧು, ಮೇಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಬಿತಾ ನಾಗೇಶ್, ಎಸ್‌ಡಿಎಂಸಿ ಅಧ್ಯಕ್ಷೆ ಟಿ.ಯು. ಮೀನಾಕುಮಾರಿ, ಸ್ವಾಗತ ಯುವಕ ಸಂಘದ ಅಧ್ಯಕ್ಷ ಟಿ.ಎನ್ ಉಮೇಶ್, ಕಾರ್ಯದರ್ಶಿ ಪವನ್ ಖಜಾಂಚಿ ಭವನ್ ಹಾಗೂ ಮಾಜಿ ಅಧ್ಯಕ್ಷರಾದ ಪಿ.ಎಂ ದಾಮೋಧರ್ ಸೇರಿದಂತೆ ಸ್ಥಳೀಯರು ಹಾಜರಿದ್ದರು.


12 ವರ್ಷದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಮಂದಿ ರಕ್ತದಾನಿಗಳು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಗಮನಸೆಳೆದರು. ಮೇಕೇರಿ, ಕಗ್ಗೋಡ್ಲು, ಬಿಳಿಗೇರಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಒಟ್ಟು 73 ಮಂದಿ ರಕ್ತದಾನಿಗಳು ರಕ್ತದಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು