ಇತ್ತೀಚಿನ ಸುದ್ದಿ
ಮೇಲಧಿಕಾರಿಯ ಕಿರುಕುಳ: ಡೆತ್ ನೋಟ್ ಬರೆದಿಟ್ಟು ವಿಕಲಚೇತನ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ; ಉಪ ತಹಸಿಲ್ದಾರ್ ಶಿವಕುಮಾರ್ ಕಾರಣರೇ?
08/01/2024, 11:40

ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ಮೇಲಧಿಕಾರಿಯ ಕಿರುಕುಳ ತಾಳಲಾರದೆ ಡೆತ್ ನೋಟ್ ಬರೆದಿಟ್ಟು ನಾಡಕಚೇರಿ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ನಂಜನಗೂಡು ತಾಲೂಕು ಹುಲ್ಲಹಳ್ಳಿ ನಾಡ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವಿಶೇಷ ಚೇತನರೂ ಆಗಿದ್ದ ಪರಮೇಶ್ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ.
ಹುಲ್ಲಹಳ್ಳಿಯಲ್ಲಿ ಹಲವಾರು ವರ್ಷಗಳಿಂದ ನಾಡ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮೃತ ದುರ್ದೈವಿ ಪರಮೇಶ್ ಅವರು ಹುಲ್ಲಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದಾರೆ.
ವಿಷಯ ತಿಳಿದ ಸಾರ್ವಜನಿಕರು ಕೂಡಲೇ ಅವರನ್ನು ಹುಲ್ಲಹಳ್ಳಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ. ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.
ಕಳೆದ ಏಪ್ರಿಲ್ ನಿಂದ ನನಗೆ ಸಂಬಳವಾಗದೆ ಜೀವನ ನಡೆಸುವುದೇ ಸಮಸ್ಯೆಯಾಗಿತ್ತು.
ಅಲ್ಲದೆ ನಾಡಕಚೇರಿಯ ಉಪತಹಸಿಲ್ದಾರ್ ಶಿವಕುಮಾರ್ ಎಂಬುವವರು ನಾನು ಅಂಗವಿಕಲನಾಗಿದ್ದರೂ ನನಗೆ ಮಾನಸಿಕ ಹಿಂಸೆ ನೀಡಿ ನನ್ನ ಮೇಲೆ ವೈಯಕ್ತಿಕ ದ್ವೇಷ ಸಾಧಿಸುತ್ತಾ ಕೆಲಸ ಮಾಡಲು ಬಿಡದೆ ನನ್ನ ಆತ್ಮಹತ್ಯೆಗೆ ಅವರೇ ಕಾರಣರಾಗಿದ್ದಾರೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹುಲ್ಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.