5:46 AM Monday21 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಾನಸಿಕ ಕ್ಷೋಭೆ: ಉಡುಪಿಯಲ್ಲಿ ಚಾಕು ಬೀಸಿ 17 ವರ್ಷದ ಬಾಲಕಿ ರಂಪಾಟ; ಕೂದಲೆಳೆಯಿಂದ ಪಾರಾದ ವಿಶು ಶೆಟ್ಟಿ ಅಂಬಲಪಾಡಿ

16/06/2026, 17:41

ಉಡುಪಿ(reporterkarnataka.com): ಅದಾವುದೋ ಕಾರಣಕ್ಕೆ ಮಾನಸಿಕ ಕ್ಷೋಭೆಗೆ ಒಳಗಾಗಿದ್ದ 17 ವರ್ಷದ ಅಪ್ರಾಪ್ತ ಬಾಲಕಿ ತನ್ನನ್ನು ರಕ್ಷಿಸಲು ಮುಂದಾದ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರ
ಮೇಲೆಯೇ ಚಾಕು ಹಿಡಿದು ದಾಳಿ ನಡೆಸಿ ರಾದ್ಧಾಂತ ಸೃಷ್ಟಿಸಿದ ಘಟನೆ ಸೋಮವಾರ ಉಡುಪಿಯ ಬನ್ನಂಜೆ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಯುವತಿ ವಿಶು ಶೆಟ್ಟಿ ಅವರ ಮೇಲೆ ಚಾಕು ಬೀಸಿದ್ದು, ಕೂದಲೆಳೆಯ ಅಂತರದಲ್ಲಿ ಅವರು ಪಾರಾಗಿದ್ದಾರೆ.
ಬಾಲಕಿಯ ರಾದ್ಧಾಂತವನ್ನು ಕಂಡು ಬೆಚ್ಚಿ ಆಕೆಯ ತಾಯಿ ಮೂರ್ಚೆ ಬಿದ್ದಿದ್ದು, ಬಾಲಕಿ ತಂದೆಯ ಅಪೇಕ್ಷೆ ಮೇರೆಗೆ ಬಾಲಕಿ ಹಾಗೂ ಆಕೆಯ ತಾಯಿ ಇಬ್ಬರನ್ನೂ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

*ಪ್ರಕರಣದ ಹಿನ್ನಲೆ*: ಉತ್ತರ ಕನ್ನಡ ಮೂಲದ 17 ವರ್ಷದ ಬಾಲಕಿ ಯಾವುದೋ ಕಾರಣದಿಂದ ಮಾನಸಿಕ ಕ್ಷೋಭೆಗೆ ಒಳಗಾಗಿದ್ದಳು. ಹೆತ್ತವರ ಕಣ್ಣು ತಪ್ಪಿಸಿ ಉಡುಪಿಗೆ ಬರುವ ಸರಕಾರಿ ಬಸ್ಸನ್ನು ಏರಿದ್ದಳು .
ಸುದ್ದಿ ತಿಳಿದ ಹೆತ್ತವರು ಕಾರಿನ ಮೂಲಕ ಬಾಲಕಿಯಿದ್ದ ಬಸ್ಸನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ.
ಪ್ರಕರಣದ ಬಗ್ಗೆ ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿಯವರು ತಕ್ಷಣ ಬನ್ನಂಜೆಯ ಸರಕಾರಿ ಬಸ್ ನಿಲ್ದಾಣಕ್ಕೆ ಧಾವಿಸಿ ಬಾಲಕಿಯನ್ನು ಪೊಲೀಸರು ಹಾಗೂ ಮಕ್ಕಳ ರಕ್ಷಣಾ ಇಲಾಖೆಯ ಸಹಾಯದಿಂದ ತಮ್ಮ ವಶಕ್ಕೆ ಪಡೆದುಕೊಳ್ಳಲು ಪ್ರಯತ್ನಿಸಿದ್ದಾರೆ.
ಈ ಸಂದರ್ಭದಲ್ಲಿ ತನ್ನ ಮನೋ ನಿಯಂತ್ರಣ ಕಳೆದುಕೊಂಡ ಬಾಲಕಿ ಬ್ಯಾಗಿನಿಂದ ಚಾಕು ತೆಗೆದು ವಿಶು ಶೆಟ್ಟಿ ಮೇಲೆ ಮುಗಿಬಿದ್ದಿದ್ದಾರೆ. ಅಕಸ್ಮಾತ್ ನಡೆದ ಈ ದಾಳಿಗೆ ಕೂದಲೆಳೆಯ ಅಂತರದಲ್ಲಿ ವಿಶು ಶೆಟ್ಟಿ ಅಪಾಯದಿಂದ ಪಾರಾಗಿದ್ದಾರೆ.
ಜೀವದ ಹಂಗು ತೊರೆದು ಬಾಲಕಿಯ ಕೈಯಲ್ಲಿದ್ದ ಚಾಕುವನ್ನು ಸೆಳೆದುಕೊಳ್ಳುವಲ್ಲಿ ವಿಶು ಶೆಟ್ಟಿ ಸಫಲರಾಗಿದ್ದಾರೆ.
ಬಾಲಕಿಯ ಆರ್ಭಟಕ್ಕೆ ಬಸ್ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದರು. ಅಲ್ಲದೇ ಬಾಲಕಿಯು ಮುಷ್ಟಿ ಹಿಡಿದು ಇಬ್ಬರು ಪ್ರಯಾಣಿಕರ ಮೇಲೆಯೂ ಹಲ್ಲೆ ಮಾಡಿ ಉದ್ವಿಗ್ನ ವಾತಾವರಣ ನಿರ್ಮಿಸಿದ್ದಳು ಎಂದು ವಿಶು ಶೆಟ್ಟಿ ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆಯಲ್ಲಿ ಮಹಿಳಾ ಠಾಣೆಯ ರಶ್ಮಿ ಹಾಗೂ ಮಕ್ಕಳ ರಕ್ಷಣಾ ಇಲಾಖೆಯ ಸುನಂದಾ ಹಾಗೂ ನಾಗರತ್ನ ನೆರವಾದರು.
ಬಾಲಕಿಯ ಈ ಮನೋ ಸ್ಥಿತಿಗೆ ಪ್ರೇಮ ವೈಫಲ್ಯ ಕಾರಣ ಇರಬಹುದು ಎಂದು ಶಂಕಿಸಲಾಗಿದೆ. ಬಾಲಕಿಗೆ ಇನ್ಸ್ಟಾಗ್ರಾಮ್ ಮೂಲಕ ಹೊರ ರಾಜ್ಯದ ಯುವಕನ ಪರಿಚಯವಾಗಿದ್ದು, ನಿರಂತರ ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದಳು ಎಂಬ ಮಾಹಿತಿಯನ್ನು ಬಾಲಕಿಯ ತಂದೆ ತಿಳಿಸಿದ್ದಾರೆ.

*ಹೆತ್ತವರೇ ಎಚ್ಚರಗೊಳ್ಳಿ:* ಇಂದು ಮೊಬೈಲ್ ನಿಂದಾಗಿ ಯುವಕ, ಯುವತಿಯರು ದಾರಿ ತಪ್ಪುತ್ತಿದ್ದಾರೆ. ಪ್ರಮುಖವಾಗಿ ಕಾಲೇಜು ಹೋಗುತ್ತಿರುವ ಯುವಕ, ಯುವತಿಯರಲ್ಲಿ ಮೊಬೈಲ್ ಸಾಮಾನ್ಯ ಎಂಬಂತಾಗಿದೆ. ಮೊಬೈಲ್ ಕೊಡುವುದು ತಪ್ಪಲ್ಲ ಆದರೆ ಮಕ್ಕಳು ಮೊಬೈಲಿನಲ್ಲಿ ಏನು ಮಾಡುತ್ತಿದ್ದಾರೆ ಎಂಬ ಎಚ್ಚರ ಹೆತ್ತವರಿಗೆ ಇರಬೇಕು. ಪ್ರಕರಣ ಕೈ ಮೀರಿದಾಗ ಅಳುವುದಲ್ಲ. ತಮ್ಮ ಮಕ್ಕಳಿಗೆ ಸರಿಯಾದ ತಿಳುವಳಿಕೆ ನೀಡಬೇಕು. ನಿಜಾರ್ಥದಲ್ಲಿ ಪೋಷಕರಾಗಬೇಕು ಎಂದು ವಿಶು ಶೆಟ್ಟಿ ಕಿವಿ ಮಾತುಗಳನ್ನು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು