ಇತ್ತೀಚಿನ ಸುದ್ದಿ
ಮಾನಸಿಕ ಕಿರುಕುಳ: ಬೇಳೂರು ಗ್ರಾಮ ಪಂಚಾಯಿ ಕಚೇರಿಯಲ್ಲಿ ಮಹಿಳಾ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆಗೆ ಯತ್ನ
17/10/2025, 12:17

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnata@gmail.com
ಸೋಮವಾರಪೇಟೆ ತಾಲೂಕಿನ ಬೇಳೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಒಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಇದೇ ಗ್ರಾಮ ಪಂಚಾಯಿತಿಯ ಪಿಡಿಓ ಮತ್ತು ಕೆಲವು ಸದಸ್ಯರು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಕಂಪ್ಯೂಟರ್ ಆಪರೇಟರ್ ಪವಿತ್ರ ಈ ಹಿಂದೆ ಸೋಮವಾರಪೇಟೆ ಪೊಲೀಸ್ ಠಾಣೆ, ತಾಲೂಕು ಪಂಚಾಯಿತಿ ಸಿಇಓ ಹಾಗೂ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು ಸಹ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಕಚೇರಿಯಲ್ಲೇ ವಿಷ ಸೇವಿಸಿದ್ದಾರೆ. ತಕ್ಷಣ ಪವಿತ್ರಾ ಳನ್ನು ಸೋಮವಾರಪೇಟೆ ಆಸ್ಪತ್ರೆಗೆ ಸಾಗಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ, ಸೋಮವಾರಪೇಟೆ ಪೊಲೀಸರು ಆಸ್ಪತ್ರೆಗೆ ತೆರಳಿ ಪವಿತ್ರಾ ಅವರಿಂದ ಮಾಹಿತಿ ಪಡೆದಿದ್ದಾರೆ.