3:43 AM Tuesday25 - November 2025
ಬ್ರೇಕಿಂಗ್ ನ್ಯೂಸ್
ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ

ಇತ್ತೀಚಿನ ಸುದ್ದಿ

ಬೇಲೆಕೇರಿ ಬಂದರಿನಿಂದ 11,312 ಮೆಟ್ರಿಕ್ ಟನ್ ಅದಿರು ನಾಪತ್ತೆ ಪ್ರಕರಣ: ಸಿಬಿಐನಿಂದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ ಬಂಧನ

24/10/2024, 23:50

ಬೆಂಗಳೂರು(reporterkarnataka.com): ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್‌ ಅವರನ್ನು ಸಿಬಿಐ ಬಂಧಿಸಿದೆ.
2010ರಲ್ಲಿ ಬೇಲೆಕೇರಿ ಬಂದರಿನಲ್ಲಿನಲ್ಲಿ ಇರಿಸಿದ್ದ ಅದಿರು ನಾಪತ್ತೆ ಪ್ರಕರಣ ಸಂಬಂಧ ಕೋರ್ಟ್ ಕಾರವಾರದ ಶಾಸಕ ಸತೀಶ್ ಸೈಲ್ ಅವರು ಅಪರಾಧಿ ಎಂದು ತೀರ್ಪಿನಲ್ಲಿ ಪ್ರಕಟಿಸಿದೆ. ಶಿಕ್ಷೆಯ ಪ್ರಮಾಣವನ್ನು ಶುಕ್ರವಾರ ಪ್ರಕಟಿಸುವುದಾಗಿ ತಿಳಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧಿಸುವಂತೆ ಗುರುವಾರ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಿದ್ದಾರೆ.
ಬೇಲೆಕೇರಿಯಲ್ಲಿ ಸೀಜ್ ಆಗಿದ್ದಂತಹ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಸಂಬಂಧ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು.
ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಾದ-ಪ್ರತಿವಾದ ಆಲಿಸಿ, ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಅರಣ್ಯಾಧಿಕಾರಿ ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಸೇರಿ ಹಲವರನ್ನು ದೋಷಿಗಳು ಎಂಬುದಾಗಿ ತೀರ್ಪು ನೀಡಿದೆ.
ಆರೋಪಿಗಳನ್ನು ಸಿಬಿಐ ಬಂಧಿಸಿ, ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು