12:20 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಮೆಟ್ರೋ ದರ ಏರಿಕೆ: ಖಾಲಿ ಟ್ರಂಕ್ ಹಿಡಿದು ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ ನಿರತ ಸಂಸದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ

09/02/2026, 12:07

ಬೆಂಗಳೂರು(reporterkarnataka.com): ನಮ್ಮ ಮೆಟ್ರೋ ಟಿಕೆಟ್‌ ದರ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಇಂದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾನಿರತ ಸಂಸದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯನ್ನು ಟೀಕಿಸಿ ಸಂಸದ ತೇಜಸ್ವಿ ಸೂರ್ಯ ಆರ್‌.ವಿ. ರಸ್ತೆ ಮೆಟ್ರೋ ನಿಲ್ದಾಣಕ್ಕೆ ಖಾಲಿ ಟ್ರಂಕ್ ಹಿಡಿದುಕೊಂಡು ಆಗಮಿಸಿದರು. ಅಲ್ಲದೇ ಆರ್‌.ವಿ. ರಸ್ತೆಯಿಂದ ನ್ಯಾಷನಲ್ ಕಾಲೇಜಿಗೆ ಮೆಟ್ರೋ ಟಿಕೆಟ್ ಪಡೆದು, ಟ್ರಂಕ್ ಜೊತೆಗೆ ಪ್ರಯಾಣಿಸಲು ಮುಂದಾದರು. ಆದರೆ ಮೆಟ್ರೋ ಏರುವ ಮೊದಲು ಪೊಲೀಸರು ಅವರನ್ನು ತಡೆದರು. ಸಂಸದರನ್ನು ಹಾಗೂ ಅವರ ಕೈಯಲ್ಲಿದ್ದ ಟ್ರಂಕ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಮಾತನಾಡಿದ ಸಂಸದ ತೇಜಸ್ವಿ ಸೂರ್ಯ ʼನಾನು ಪ್ರತಿಭಟನೆ ಮಾಡುತ್ತಿಲ್ಲ. ಟಿಕೆಟ್ ತೆಗೆದುಕೊಂಡು ಸಾಮಾನ್ಯ ಪ್ರಯಾಣಿಕನಂತೆ ಮೆಟ್ರೋ ಏರಲು ಬಂದಿದ್ದೇನೆ. ನನ್ನ ಕೈಯಲ್ಲಿರುವ ಖಾಲಿ ಟ್ರಂಕ್ ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯ ಪ್ರತೀಕ. ಸರ್ಕಾರವೇ ಹೇಳುವಂತೆ ಖಜಾನೆ ಖಾಲಿಯಾಗಿದೆʼ ಎಂದು ವ್ಯಂಗ್ಯವಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು