ಇತ್ತೀಚಿನ ಸುದ್ದಿ
ಸರಳ, ಸಜ್ಜನಿಕೆಯ ಪ್ರಾಮಾಣಿಕ ಹೋರಾಟಗಾರ ಮೈಕೆಲ್ ಫರ್ನಾಂಡಿಸ್: 92ನೇ ಜನ್ಮದಿನಾಚರಣೆಯಲ್ಲಿ ಸಿಎಂ ಸಿದ್ದರಾಮಯ್ಯ
19/08/2025, 21:28

ಬೆಂಗಳೂರು(reporterkarnataka.com):ಸರಳ,ಸಜ್ಜನಿಕೆಯ ಪ್ರಾಮಾಣಿಕ ಹೋರಾಟಗಾರ ಮೈಕೆಲ್ ಫರ್ನಾಂಡಿಸ್ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಹಿಂದ್ ಮಜ್ದೂರ್, ಕಿಸಾನ್ ಪಂಚಾಯತ್ ಮತ್ತು ಸಂತೋಷ್ ಲಾಡ್ ಫೌಂಡೇಷನ್ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಮಿಕ ನಾಯಕ, ಮಾಜಿ ಶಾಸಕ ಮೈಕೆಲ್ ಫರ್ನಾಂಡೀಸ್ ಅವರ 92ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಮೈಕೆಲ್ ಮತ್ತು ಪತ್ನಿ ಡೋನಾ ಫರ್ನಾಂಡೀಸ್ ಅವರನ್ನು ಸನ್ಮಾನಿಸಿ ಮಾತನಾಡಿದರು.