7:34 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

Micro Finance | ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ಆಧ್ಯಾದೇಶ 2025ರಲ್ಲಿ ಏನಿದೆ? ಇಲ್ಲಿದೆ ಮುಖ್ಯಾಂಶ

13/02/2025, 19:44

ಬೆಂಗಳೂರು(reporterkarnataka.com):
1. ಸದರಿ ಆಧ್ಯಾದೇಶವು ದಿನಾಂಕ: 12.02.2025 ರಂದು ಜಾರಿಗೆ ಬಂದಿದೆ.
2. ಸದರಿ ಆಧ್ಯಾದೇಶವು ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಮತ್ತು ಇತರೆ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಲೇವಾದೇವಿಗಾರರು ನೀಡುವ ಹೆಚ್ಚಿನ ಬಡ್ಡಿ ದರಗಳಿಂದ ಸಾಲಗಾರರಿಗೆ ಆಗುವ ಹೊರೆ ಮತ್ತು ಬಲವಂತದ ವಸೂಲಾತಿ ಕ್ರಮಗಳಿಂದ ಆಗುವ ಕಿರುಕುಳಗಳನ್ನು ನಿಯಂತ್ರಿಸಲು ಉದ್ದೇಶಿಸಿದೆ.
3. ಇದರಿಂದ ವಿಶೇಷವಾಗಿ ದುರ್ಬಲರು, ಮಹಿಳೆಯರು ಮತ್ತು ರೈತರು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಮರುಪಾವತಿ ವಿಷಯದಲ್ಲಿ ಕಿರುಕುಳಗಳನ್ನು ತಪ್ಪಿಸಲು ಸಹಾಯಕವಾಗಿರುತ್ತದೆ.
4. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯುವಂತಿಲ್ಲ ಎಂದು ಆದೇಶಿಸಲಾಗಿದೆ.
5. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಗ್ರಾಹಕರಿಗೆ ವಿಧಿಸುವ ಬಡ್ಡಿದರದ ಬಗ್ಗೆ ಪಾರದರ್ಶಕವಾಗಿ ಸಾಲಗಾರರಿಗೆ ಲಿಖಿತ ರೂಪದಲ್ಲಿ ತಿಳಿಸುವಂತೆ ಆದೇಶಿಸಲಾಗಿದೆ.
6. ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಗೆ ಮಾತ್ರ ಈ ಆಧ್ಯಾದೇಶ ಅನ್ವಯವಾಗುತ್ತದೆ. ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಅಂದಾಜು ರೂ. 60,000 ಕೋಟಿ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದು, ನೋಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ವಿವರವಾಗಿ ಇಲ್ಲವಾದರೂ ಅಂದಾಜು ರೂ. 40,000 ಕೋಟಿ ಸಾಲ ಪಡೆದಿರುವರು ಎಂದು ಅಂದಾಜಿಸಲಾಗಿದೆ.
7. ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಸದರಿ ಸಂಸ್ಥೆಗಳು ತಾವು ವಿಧಿಸುವ ಬಡ್ಡಿದರ, ಸಾಲಗಾರರ ಮಾಹಿತಿ, ಸುಸ್ಥಿ ಸಾಲಗಳ ವಿವರ ಮುಂತಾದವುಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕಾಗಿರುತ್ತದೆ.
8. ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಿಗೆ ತ್ರೈಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಸಲ್ಲಿಸಬೇಕು. ಸದರಿ ಮಾಹಿತಿಯನ್ನು ಸಲ್ಲಿಸದಿದ್ದಲ್ಲಿ, 6 ತಿಂಗಳ ಕಾರಾ ವಾಸದೊಂದಿಗೆ ಅಥವಾ ರೂ.10,000/- ಗಳಿಗೆ ವಿಸ್ತರಿಸಬಹುದಾದ ಜುಲ್ಮಾನೆ ಅಥವಾ ಅವೆರಡರಿಂದಲೂ ದಂಡಿತರಾಗುತ್ತಾರೆ.
9. ವಿವಾದಗಳನ್ನು ಇತ್ಯರ್ಥ್ಯ ಪಡಿಸುವುದಕ್ಕಾಗಿ ಒಂಬುಡ್ಸ್ ಪರ್ಸನ್‌ಗಳನ್ನು ಸರ್ಕಾರವು ಅಧಿಸೂಚನೆಯ ಮೂಲಕ ನೇಮಕ ಮಾಡಬಹುದು.
10. ಬಲವಂತದ ವಸೂಲಿ ಕ್ರಮಗಳನ್ನು ವಿವರವಾಗಿ ತಿಳಿಸಲಾಗಿದೆ.
11. ಬಲವಂತದ ವಸೂಲಿ ಕ್ರಮಗಳನ್ನು ಕೈಗೊಂಡಲ್ಲಿ, ಯಾವುದೇ ವ್ಯಕ್ತಿಯೂ ವಿಚಾರಣೆಗೆ ಒಳಪಡುತ್ತಾನೆ ಮತ್ತು 10 ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಯ ಕಾರಾವಾಸದ ಶಿಕ್ಷೆ ಹಾಗೂ ರೂ. 5 ಲಕ್ಷ ಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯೊಂದಿಗೆ ದಂಡಿತನಾಗುತ್ತಾನೆ. ಈ ಅಪರಾಧಗಳು ಸಂಜ್ಞೇಯ ಅಪರಾಧ/ ಜಾಮೀನು ರಹಿತ (Cognizable / Non Bailable) ಆಗಿರುತ್ತವೆ. ಯಾವುದೇ ಪೋಲೀಸ್‌ ಅಧಿಕಾರಿ ಇಂತಹ ಪ್ರಕರಣಗಳನ್ನು ನೋಂದಣಿ ಮಾಡಿಕೊಳ್ಳುವುದು ನಿರಾಕರಿಸಲಾಗುವುದಿಲ್ಲ.
12. ಪೋಲೀಸ್‌ ಉಪ ಅಧೀಕ್ಷಕರ (Dy SP) ದರ್ಜೆಗೆ ಕಡಿಮೆಯಿಲ್ಲದ ಅಧಿಕಾರಿಯು ಸ್ವತ: (Suo moto) ಪ್ರಕರಣವನ್ನು ದಾಖಲಿಸಬಹುದು.
13. ಸರ್ಕಾರವು ಕಾಲಕಾಲಕ್ಕೆ ಈ ಆಧ್ಯಾದೇಶದ ಅನುಷ್ಠಾನಕ್ಕಾಗಿ ನಿರ್ದೇಶನಗಳನ್ನು ನೀಡುವ ಅಧಿಕಾರ ಹೊಂದಿರುತ್ತದೆ.
14. ಈ ಆಧ್ಯಾದೇಶದಿಂದ ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚುತ್ತದೆ ಮತ್ತು ಸಾಲಗಾರರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ದೊರೆಯುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು