2:21 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ

23/11/2024, 16:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳೆಗದ್ದೆ ಹೊಸಪುರ ಗ್ರಾಮದಲ್ಲಿ ನಡೆದಿದೆ.


ಹೊಸಪುರ ಗ್ರಾಮದ ಪರಿಶಿಷ್ಟ ಪಂಗಡ ಸಮುದಾಯದ ಕುಟುಂಬವೊಂದರ ಗುಡಿಸಲು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಪರಿಶಿಷ್ಟ ಪಂಗಡದ ಹಸಲರು ಜನಾಂಗದ ಜ್ಯೋತಿ ಚಂದ್ರು ದಂಪತಿಗಳ ಗುಡಿಸಲು ಬೆಂಕಿಗೆ ಆಹುತಿಯಾಗಿದೆ. ವಾಸ ಮಾಡಲು ಮನೆಯಿಲ್ಲದೇ ಬೇಲಿಯ ಗುಡಿಸಲು ಕಟ್ಟಿಕೊಂಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ದಂಪತಿ ತಡಿಕೆಯಿಂದಲೇ ಮನೆ ನಿರ್ಮಿಸಿಕೊಂಡಿದ್ದರು. ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದು, ದಂಪತಿ ಕೂಲಿಗೆ ಹೋಗಿದ್ದಾಗ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಬೆಂಕಿಯಿಂದ ಮನೆಯ ತಡಿಕೆ, ಪಾತ್ರೆ ಪಗಡೆ, ಬಟ್ಟೆ ಬರೆ, ದಾಖಲೆಗಳೆಲ್ಲಾ ಸುಟ್ಟುಹೋಗಿವೆ.
ಇದರಿಂದ ಬಡ ಕುಟುಂಬದ ದಂಪತಿ ಮತ್ತು ಶಾಲೆಗೆ ಹೋಗುತ್ತಿರುವ ಅವರ ಮಗ ಮತ್ತು ಮಗಳು ಅತಂತ್ರರಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಮಕ್ಕಳು ಪುಸ್ತಕಗಳು ಸಹ ಸುಟ್ಟುಹೋಗಿವೆ.
ಇವರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು, ಸರ್ಕಾರದ ವಸತಿ ಯೋಜನೆಗಳಿಂದ ಮನೆ ನಿರ್ಮಾಣ ಮಾಡಿಕೊಡಬೇಕು ಎಂದು ಮೂಡಿಗೆರೆ ತಾಲ್ಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಹರೀಶ್ ಪಲ್ಗುಣಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು