5:53 PM Thursday29 - October 2026
ಬ್ರೇಕಿಂಗ್ ನ್ಯೂಸ್
4 ಎಂಎಲ್‌ಸಿ ಕ್ಷೇತ್ರ ಗೆದ್ದ ಮಾತ್ರಕ್ಕೆ ಬಿಜೆಪಿ ಬಿಗೋದು ಬೇಡ: ಕಲಬುರಗಿಯಲ್ಲಿ ಆರೋಗ್ಯ… ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ

ಇತ್ತೀಚಿನ ಸುದ್ದಿ

ಮಿನಿ ಕರ್ನಾಟಕ ಕ್ರೀಡಾಕೂಟ ಉದ್ಘಾಟನೆ | ನಿಮ್ಮ ಉತ್ಸಾಹಕ್ಕೆ ತಕ್ಕಷ್ಟು ನಮ್ಮ ಪ್ರೋತ್ಸಾಹ: ಸಿಎಂ ಘೋಷಣೆ

03/11/2025, 08:49

ಬೆಂಗಳೂರು(reporterkarnataka.com): ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಸಹಕಾರ ನೀಡುತ್ತಿದೆ. ನಿಮ್ಮ ಉತ್ಸಾಹಕ್ಕೆ ತಕ್ಕಂತೆ ನಮ್ಮ ಪ್ರೋತ್ಸಾಹ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಮತ್ತು ರಾಜ್ಯ ಒಲಂಪಿಕ್ ಅಸೋಸಿಯೇಷನ್ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 14 ವರ್ಷದೊಳಗಿನ ಮಕ್ಕಳ ಮಿನಿ ಕರ್ನಾಟಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಪ್ರೋತ್ಸಾಹ ಕೊಟ್ಟುಕೊಂಡೇ ಬರುತ್ತಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಇಂಥಾ ಕ್ರೀಡಾಕೂಟ ಸಹಕಾರಿ ಆಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಉತ್ಸಾಹದಿಂದ ಭಾಗವಹಿಸಿ. ಕ್ರೀಡೆಯಲ್ಲಿ ಗೆಲುವು ಸೋಲಿಗಿಂತ ಭಾಗವಹಿಸುವಿಕೆ ಅತೀ ಮುಖ್ಯ ಎಂದರು.
ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿ ಶೇ3 ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ2 ರಷ್ಟು ಹುದ್ದೆಗಳನ್ನು ಒದಗಿಸಲಾಗುತ್ತದೆ ಎಂದು ಅವರು ನುಡಿದರು.
ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿಜೇತರಾಗಿ ಪದಕ ತಂದ ಕ್ರೀಡಾ ಪಟುಗಳಿಗೆ ಉತ್ತಮ ನಗದು ಬಹುಮಾನವನ್ನೂ ನೀಡುತ್ತಿದೆ ಎಂದು ವಿವರಿಸಿದರು.
ಸಚಿವರಾದ ರಾಮಲಿಂಗಾರೆಡ್ಡಿ, ರಾಜ್ಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಕೆ.ಗೋವಿಂದರಾಜು, ಶಾಸಕರಾದ ರಿಜ್ವಾನ್ ಅರ್ಷದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು