1:42 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಿನಿ ಒಲಿಂಪಿಕ್ಸ್ ಕ್ರೀಡಾಕೂಟ; ರಾಯಚೂರು ಜಿಲ್ಲೆಯಿಂದ 12 ಮಂದಿ ಕ್ರೀಡಾಪಟುಗಳು ಆಯ್ಕೆ

09/12/2021, 10:43

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲಾ ಅಮೇಚೂರ್ ಖೋಖೋ ಅಸೋಸಿಯೇಷನ್ ಮತ್ತು ಮಸ್ಕಿ ತಾಲೂಕು ಅಮೆಚೂರ ಖೋಖೋ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಖೋಖೋ ತಂಡದ ಆಯ್ಕೆ ಪುರುಷ ಮತ್ತು ಮಹಿಳೆಯರಿಗಾಗಿ ನಡೆಸಲಾಗಿದ್ದು, ಸುಮಾರು 206 ಗಂಡು ಮಕ್ಕಳು 46 ಹೆಣ್ಣು ಮಕ್ಕಳು ಭಾಗವಹಿಸಿದ್ದರು.

ಇವರಲ್ಲಿ ಉತ್ತಮ 12 ಪುರುಷ ಹಾಗೂ ಮಹಿಳಾ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಡಿಸೆಂಬರ್ 3,4, ಮತ್ತು 5 ರಂದು ಬೆಂಗಳೂರಿನ ಹೆನ್ನಾಗರದಲ್ಲಿ ನಡೆಯುವ ರಾಜ್ಯ ಮಟ್ಟದ ಚಾಂಪಿಯನ್ ಶಿಪ್ ಗೆ ಆಯ್ಕೆ ಮಾಡಲಾಗಿದೆ. ಅದರಲ್ಲಿ ರಾಯಚೂರು ಜಿಲ್ಲೆಯ ಪುರುಷ ಹಾಗೂ ಮಹಿಳಾ ತಂಡಗಳು ಉತ್ತಮ ಪ್ರದರ್ಶನ ನೀಡಿದ್ದವು. ಕನಾ೯ಟಕ ರಾಜ್ಯ ಚಾಂಪಿಯನ್ ಶಿಪ್ ನಲ್ಲಿ ಒಟ್ಟಾರೆ 16 ಜಿಲ್ಲೆಯಿಂದ ಪುರುಷ ಹಾಗೂ 12  ಜಿಲ್ಲೆಯಿಂದ ಮಹಿಳಾ ತಂಡಗಳು ಪ್ರತಿನಿಧಿಸಿದ್ದವು. ಪುರುಷ ವಿಭಾಗದಿಂದ ಒಟ್ಟಾರೆಯಾಗಿ 16 ತಂಡಗಳಿಂದ ನಾಲ್ಕು ಗುಂಪುಗಳಾಗಿ ವಿಂಗಡೆನೆ ಮಾಡಿ ಅದರಲ್ಲಿ ಉತ್ತಮ ಪ್ರದರ್ಶನ ನೀಡುವ 8 ತಂಡಗಳನ್ನು ಮಾತ್ರ ಮುಂದಿನ ತಿಂಗಳು ರಾಜ್ಯ ಸರ್ಕಾರದ ವತಿಯಿಂದ ಮಂಗಳೂರು, ಉಡುಪಿಯಲ್ಲಿ ನಡೆಸಲ್ಪಡುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಕಳುಹಿಸಿ ಕೊಡುವ ಉದ್ದೇಶವನ್ನು ಹೊಂದಿದೆ. ಅದರಲ್ಲಿ 


ರಾಯಚೂರು ತಂಡವು ಮಂಡ್ಯ ಮತ್ತು ಚಾಮರಾಜ ನಗರ ತಂಡವನ್ನು ಇನ್ನಿಂಗ್ಸ್ ಅಂತರದಲ್ಲಿ ಸೋಲಿಸಿ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆ ಯಾಗಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು