6:05 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಸಚಿವ ಡಿ. ಸುಧಾಕರ್ ಆರೋಗ್ಯ ಗಂಭೀರ: ಕಿಮ್ಸ್ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

25/04/2026, 20:22

ಬೆಂಗಳೂರು(reporterkarnataka.com): ಯೋಜನೆ ಮತ್ತು ಸಾಂಖಿತ ಇಲಾಖೆ ಸಚಿವ ಡಿ ಸುಧಾಕರ್ ಕಳೆದ ಕೆಲವು ದಿನಗಳಿಂದ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಸುತ್ತಿದ್ದಾರೆ, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ಮಾಡಿ ಅರೋಗ್ಯ ವಿಚಾರಿಸಿದರು.
ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡಿ. ಸುಧಾಕರ್ ಅವರನ್ನು ಇತ್ತೀಚೆಗೆ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.


ಸುಧಾಕರ್ ಆರೋಗ್ಯ ಕ್ಷೀಣಿಸುತ್ತಿದ್ದ ಕಾರಣ ಆತಂಕ ಮನೆ ಮಾಡಿತ್ತು. ಇದೀಗ ಸುಧಾಕರ್ ಆರೋಗ್ಯ ವಿಚಾರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಮ್ಸ್ ಆಸ್ಪತ್ರಗೆ ಭೇಟಿ ನೀಡಿದ್ದಾರೆ.
ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸುಧಾಕರ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಸುಧಾಕರ್ ಆರೋಗ್ಯ ಗಂಭೀರವಾಗಿದೆ. ಆಸ್ಪತ್ರೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ವೈದ್ಯರ ಜೊತೆ ಚರ್ಚಿಸಿದ್ದಾರೆ. ಸುಧಾಕರ್ ಆರೋಗ್ಯ ಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
ಸುಧಾಕರ್ ಆರೋಗ್ಯ ಕುರಿತು ವೈದ್ಯರಿಂದ ಮಾಹಿತಿ ಪಡೆದ ಸಿದ್ದರಾಮಯ್ಯ ಬಳಿಕ ಕುಟುಂಬಸ್ಥರ ಭೇಟಿಯಾಗಿ ಮಾತನಾಡಿದ್ದಾರೆ. ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ಆರೋಗ್ಯ ಸ್ಥಿರವಾಗಿದ್ದು, ಶೀಘ್ರದಲ್ಲೇ ಚೇತರಿಸಿಕೊಳ್ಳುವ ಭರವಸೆ ವ್ಯಕ್ತಪಡಿಸಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಚಿವ ಜಮೀರ್ ಅಹಮ್ಮದ್ ಖಾನ್, ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಸೇರಿದಂತೆ ಪ್ರಮುಖರು ಸಾಥ್ ನೀಡಿದರು. ಭೇಟಿ ವೇಳೆ ಆಸ್ಪತ್ರೆ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಲಾಗಿತ್ತು.
ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಡಿ ಸುಧಾಕರ್‌ಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಸಮಸ್ಯೆ ಉಲ್ಬಣಗೊಂಡ ಕಾರಣ ಆರೋಗ್ಯ ಹದಗೆಟ್ಟಿತ್ತು. ನಾಲ್ಕು ದಿನಗಳ ಹಿಂದೆ ಮಣಿಪಾಲ್ ಆಸ್ಪತ್ರೆಯಿಂದ ಕಿಮ್ಸ್ ಆಸ್ಪತ್ಪೆಗೆ ಶಿಫ್ಟ್ ಮಾಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು