3:06 AM Monday29 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಮಿಸ್ ಆ್ಯಂಡ್ ಮಿಸೆಸ್ ಇಂಡಿಯಾ ಕರ್ನಾಟಕ 2024 ; ಮಿಂಚಿದ ಕರಾವಳಿಯ ವನಿತೆಯರಿಗೆ ಸನ್ಮಾನ

05/09/2024, 12:42

ಮಂಗಳೂರು(ReporterKarnataka.com) : ಮಿಸ್ ಆ್ಯಂಡ್ ಮಿಸೆಸ್ ಇಂಡಿಯಾ ಕರ್ನಾಟಕ 2024ರ 8ನೇ ಆವೃತ್ತಿಯ ಗ್ಯ್ರಾಂಡ್‌ ಫಿನಾಲೆ ಬೆಂಗಳೂರಿನ ಕಿಂಗ್ಸ್‌ ಮೆಡೋಸ್‌ನಲ್ಲಿ ಅದ್ಧೂರಿಯಾಗಿ ಜರಗಿದ್ದು, ಕರಾವಳಿಯಿಂದ ಭಾಗವಹಿಸಿದ ವನಿತೆಯರು ಹಲವು ಕಿರೀಟಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

ಮಿಸ್ ಆ್ಯಂಡ್ ಮಿಸೆಸ್ ಇಂಡಿಯಾ ಕರ್ನಾಟಕ 2024ರ 8ನೇ ಆವೃತ್ತಿಯ ಫ್ಯಾಷನ್‌ ಶೋ ಆ.29ರಿಂದ 3 ದಿನಗಳ ಕಾಲ ನಡೆದಿದ್ದು, ವಿಜೇತರಾದ ಕರಾವಳಿಯ ವನಿತೆಯರಿಗೆ ಅಭಿನಂದನಾ ಕಾರ್ಯಕ್ರಮ ನಗರದ ಮಾಯಾ ಹೋಟೆಲ್‌ನಲ್ಲಿ ಬುಧವಾರ ನಡೆಯಿತು.

ಮಿಸೆಸ್ ಇಂಡಿಯಾ ಇಂಡಿಪೆಂಡೆಂಟ್ ಇಂಟರ್ ನ್ಯಾಷನಲ್ ಕಿರೀಟವನ್ನು ಡಾ. ನಿಶಿತಾ ಶೆಟ್ಟಿಯಾನ್, ಮಿಸೆಸ್ ಇಂಡಿಯಾ ಅರ್ಥ್ ಇಂಟರ್‌ನ್ಯಾಶನಲ್ ಕಿರೀಟವನ್ನು ಡಾ. ಶ್ರುತಿ ಬಲ್ಲಾಳ್ ಮುಡಿಗೇರಿಸಿಕೊಂಡಿದ್ದಾರೆ.

ಮಿಸೆಸ್ ಇಂಡಿಯಾ ಕರ್ನಾಟಕ ವಿಭಾಗದಲ್ಲಿ ಡಾ.ರಶ್ಮಾ ಎಂ.ಶೆಟ್ಟಿ ಪ್ರಥಮ ರನ್ನರ್ ಅಪ್, ವಿದ್ಯಾ ಸಂಪತ್ ಕರ್ಕೇರ ದ್ವಿತೀಯ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.

ಸಬಿತಾ ರಂಜಿತ್ ಕ್ಲಾಸಿಕ್ ಮಿಸೆಸ್ ಇಂಡಿಯಾ ಕರ್ನಾಟಕ ಕಿರೀಟ ಮುಡಿಗೇರಿಸಿಕೊಂಡಿದ್ದು ,
ಡಾ.ಅರ್ಚನಾ ಭಟ್ ಕ್ಲಾಸಿಕ್ ಮಿಸೆಸ್ ಇಂಡಿಯಾ ಕರ್ನಾಟಕ ತೃತೀಯ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡರು.

ಸೂಪರ್ ಕ್ಲಾಸಿಕ್ ವಿಭಾಗದಲ್ಲಿ ನಂದಿನಿ ವಿ.ಕಾಮತ್ ಸೂಪರ್ ಕ್ಲಾಸಿಕ್ ಮಿಸೆಸ್ ಇಂಡಿಯಾ ಕರ್ನಾಟಕ ಕಿರೀಟ ಮುಡಿಗೇರಿಸಿಕೊಂಡರು. ದೀಶಲ್ ತೌರೊ ಮಿಸ್ ಇಂಡಿಯಾ ಕರ್ನಾಟಕ ರನ್ನರ್‌ ಅಪ್ ಆಗಿ ಹೊರಹೊಮ್ಮಿದ್ದಾರೆ.

ರಾಜ್ಯದ ನಾನಾ ಭಾಗಗಳಿಂದ ಸುಮಾರು 35 ಸ್ಪರ್ಧಿಗಳು ಈ ಫ್ಯಾಷನ್‌ ಶೋ ನಲ್ಲಿ ಪಾಲ್ಗೊಂಡಿದ್ದರು. 3 ದಿನಗಳ ಸ್ಪರ್ಧೆಯಲ್ಲಿ ಸ್ಪರ್ಧಿಗಳು ತಮ್ಮ ಪ್ರತಿಭೆ ಪ್ರದರ್ಶಿಸಿದರು. ಅಲ್ಲದೇ ಸ್ಪರ್ಧಿಗಳು ಲಗೋರಿ, ಖೋ ಖೋ ಮತ್ತು ಗಿಲ್ಲಿದಾಂಡಿನಂತಹ ಸಾಂಪ್ರದಾಯಿಕ ಭಾರತೀಯ ಆಟಗಳಲ್ಲಿ ತೊಡಗಿಸಿಕೊಂಡು, ತಮ್ಮ ಕ್ರೀಡಾ ಮನೋಭಾವ ಪ್ರದರ್ಶಿಸಿದರು.

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರು ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿಯ ಮರ್ಸಿ ವೀಣಾ ಡಿಸೋಜಾ, ಪಾತ್‌ವೇ ಎಂಟರ್ಪ್ರೈಸಸ್‌ನ ದೀಪಕ್ ಗಂಗೂಲಿ, ಉದ್ಯಮಿ ಸುಮಾ ಸುರೇಶ್, ಹಿಂದಿನ ಆವೃತ್ತಿಗಳಲ್ಲಿ ಮಿಸೆಸ್ ಇಂಡಿಯಾ ಕರ್ನಾಟಕ ಕಿರೀಟ ಪಡೆದುಕೊಂಡಿರುವ ಜೂಲಿಯಟ್, ಡಾ.ಜೆಸ್ಸಿ, ಶಾಲೆಟ್ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು