8:19 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 2022- ಸೀಸನ್ 3 ಗ್ರಾಂಡ್ ಫಿನಾಲೆ: ಕಿರೀಟ ಮುಡಿಗೇರಿಸಿದ ಮಂಗಳೂರಿನ ಫ್ಲೇವಿ ಡಿಮೆಲ್ಲೋ

21/06/2022, 21:55

ಮಂಗಳೂರು(reporterkarnataka.com): ನಗರದ ನೆಕ್ಸಸ್ ಮಾಲ್ ನಲ್ಲಿ ನಡೆದ ವಿವಾಹಿತ ಮಹಿಳೆಯರ ರಾಷ್ಟ್ರೀಯ ಮಟ್ಟದ ಸ್ಪರ್ಧೆ ‘ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು2022- ಸೀಸನ್ 3’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರು ಬಿಜೈ ಕಾಪಿಕಾಡಿನ ಫ್ಲೇವಿ ಗ್ಲಾಡಿಸ್ ಡಿಮೆಲ್ಲೋ ಅವರು 40-60 ವಯಸ್ಸಿನ ಗುಂಪಿನ ಸ್ಪರ್ಧೆಯಲ್ಲಿ ಜಯಗಳಿಸಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.


ಮೂರು ವಯೋಮಿತಿ ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರತಿ ವಿಭಾಗದಿಂದ 4 ಸ್ಪರ್ಧಿಗಳನ್ನು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಯಿತು. ಅಗಸ್ಟ್ ತಿಂಗಳಲ್ಲಿ ಬೆಂಗಳೂರಿನಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆ ನಡೆಯಲಿದೆ. ಪ್ಲೇವಿ ಗ್ಲಾಡಿಸ್ ಡಿಮೆಲ್ಲೋ ಅವರು ಮಂಗಳೂರು ಮಹಾನಗರಪಾಲಿಕೆಯ ಸಿಬ್ಬಂದಿಯಾಗಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಇವರು  ಬಹುಮುಖ ಪ್ರತಿಭಾವಂತೆ.



ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದರು. ವಿವಾಹಿತ ಮಹಿಳೆಯರಿಗಾಗಿ ಇಂತಹ ಕಾರ್ಯಕ್ರಮವನ್ನು ಪ್ರತಿಭಾ ಸೌಂಶಿಮಠ  ಹುಟ್ಟುಹಾಕಿದ್ದು ತೀರ್ಪುಗಾರರಾಗಿ ಭಾಗವಹಿಸಿದ್ದರು. ಮರ್ಸಿ ಬ್ಯೂಟಿ ಅಕಾಡೆಮಿ ಮತ್ತು ಲೇಡೀಸ್ ಸಲೂನ್ ಮಾಲಕಿ ಮರ್ಸಿ ವೀಣಾ ಡಿಸೋಜ, ಪಾತ್ ವೇ ಎಂಟರ್ಪ್ರೈಸಸ್ ಹಾಗೂ ಸರ್ಪ್ರೈಸ್ ಸ್ಟುಡಿಯೋ ಮಾಲಕ ದೀಪಕ್ ಗಂಗೂಲಿ ಸ್ಪರ್ಧೆಯನ್ನು ಆಯೋಜಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು