11:25 PM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಮಿಸ್ ಯೂನಿವರ್ಸ್ ಸ್ಪರ್ಧೆ: ದಿವಿತಾ ರೈಗೆ ಬಂಟರ ಮಾತೃಸಂಘದಿಂದ ಸೆ. 6ರಂದು ಅಭಿನಂದನಾ ಕಾರ್ಯಕ್ರಮ

04/09/2022, 13:11

ಮಂಗಳೂರು(reporterkarnataka.com): ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ಕುಡ್ಲದ ಹಿರಿಮೆ ದಿವಿತಾ ರೈ ಅವರಿಗೆ  ಬಂಟರ ಮಾತೃಸಂಘ ಹಾಗೂ ಮಂಗಳೂರು ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ವಸತಿ ನಿಲಯದ ಅಮೃತೋತ್ಸವ ಸಮಿತಿ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಸೆಪ್ಟಂಬರ್ 6ರಂದು ಸಂಜೆ ನಾಲ್ಕು ಗಂಟೆಗೆ ಮಂಗಳೂರಿನ ಗೀತಾ ಶೆಟ್ಟಿ ಮೆಮೊರಿಯಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷರಾದ  ಅಜಿತ್ ಕುಮಾರ್ ರೈ ಮಾಲಾಡಿ ಹೇಳಿದ್ದಾರೆ. 

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೂ ಮುನ್ನ ಜ್ಯೋತಿ ವೃತ್ತದಿಂದ ಸಭಾಂಗಣದವರೆಗೆ ಮೆರವಣಿಗೆ ಮೂಲಕ ತುಳುನಾಡ ಸಾಂಪ್ರದಾಯಿಕ ಶೈಲಿಯಲ್ಲಿ ದಿವಿತಾ ರೈ ಅವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಗುವುದು ಎಂದರು. 

ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ದಿವಿತಾ ರೈ ಅವರಿಗೆ ತವರೂರಿನ ಸನ್ಮಾನ ಅತ್ಯಂತ ಮಹತ್ತ್ವವಾದುದು. ಹಾಗಾಗಿ ತುಳುನಾಡ ಸಂಸ್ಕೃತಿಯನ್ನು ವಿಶ್ವಮಟ್ಟದಲ್ಲಿ ಪಸರಿಸುವ ಅಮೋಘ ಕಾರ್ಯಕ್ರಮಕ್ಕೆ ಇದು ಸಾಕ್ಷಿಯಾಗಲಿದೆ. ಬಂಟರ ಸಂಘ ಅನೇಕ ವರ್ಷಗಳಿಂದ ಹೆಣ್ಮಕ್ಕಳ ಶಿಕ್ಷಣ ಹಾಗೂ ಉದ್ಯೋಗಕ್ಕೆ ಉತ್ತೇಜನ ನೀಡುತ್ತಾ ಬಂದಿದೆ. ಇದಕ್ಕೆ ಹೆಣ್ಮಕ್ಕಳಿಗಾಗಿಯೇ ವಿದ್ಯಾರ್ಥಿನಿ ನಿಲಯಗಳನ್ನು ಸ್ಥಾಪಿಸಿ ಅವರಿಗೆ ಸೂಕ್ತ ಪ್ರೋತ್ಸಾಹವನ್ನು ನೀಡುತ್ತಾ ಬಂದಿದೆ. ಕಾಕತಾಳೀಯವೆನ್ನುವಂತೆ ಈ ಬಾರಿಯ ಸ್ಪರ್ಧೆಯಲ್ಲಿ ದಿವಿತಾ, ಜಾಗತಿಕ ಸವಾಲುಗಳಲ್ಲೊಂದಾದ ಹೆಣ್ಣು ಮಕ್ಕಳ ಶಿಕ್ಷಣದ ಕುರಿತು ಮಾತನಾಡಲಿರುವುದು ಬಂಟರಿಗೆ ಹೆಮ್ಮೆ ತರುವಂತಹ ವಿಷಯ ಎಂದು ಅವರು ಹೇಳಿದರು. 

ಬಂಟರ ಸಂಘ ಕೇವಲ ಬಂಟ ಸಮುದಾಯದ ಪ್ರತಿಭೆಗಳನ್ನು ಮಾತ್ರವಲ್ಲದೆ ತುಳುನಾಡಿನ ಎಲ್ಲಾ ಸಮುದಾಯದ ಪ್ರತಿಭೆಗಳನ್ನು ಗುರುತಿಸಿ, ಗೌರವಿಸುವ ಕಾರ್ಯವನ್ನು ಸದಾ ನಡೆಸುತ್ತಾ ಬಂದಿದೆ. ಮುಂದೆಯೂ ಈ ಪರಂಪರೆಯನ್ನು ಮುಂದುವರಿಸಲಾಗುವುದು ಎಂದರು.

ದಿವಿತಾ ರೈ ಪರಿಚಯ: ಮೂಲತ: ಮಂಗಳೂರಿನ ನಿವಾಸಿಗಳಾದ, ಸಧ್ಯ ಮುಂಬಯಿಯಲ್ಲಿ ನೆಲೆಸಿರುವ  ದಿಲೀಪ್ ರೈ ಹಾಗೂ ಪವಿತ್ರಾ ರೈ ದಂಪತಿಯ ಪುತ್ರಿ. ಈಕೆ ಜನಿಸಿದ್ದು ಮಂಗಳೂರಿನಲ್ಲಿ; ಬೆಳೆದಿದ್ದು ಮುಂಬಯಿಯಲ್ಲಿ. ವಾಸ್ತುಶಿಲ್ಪಿ ಹಾಗೂ ಮಾಡೆಲ್ ಆಗಿರುವ ಇವರು ಮುಂಬಯಿಯ ಸರ್ ಜೆ.ಜೆ. ಕಾಲೇಜ್ ಆಫ್ ಆರ್ಕಿಟೆಕ್ಚರ್‌ನಲ್ಲಿ ಪದವೀಧರೆ. ಬ್ಯಾಡ್ಮಿಂಟನ್, ಬಾಸ್ಕೆಟ್‌ಬಾಲ್, ಚಿತ್ರಕಲೆ, ಸಂಗೀತ ಕೇಳುವುದು ಮತ್ತು ಓದುವುದು ಇವರ ಹವ್ಯಾಸಗಳು. ಇವರ ಅಣ್ಣ ದೈವಿಕ್ ರೈ ಕೂಡಾ ಪ್ರತಿಭಾವಂತ. ಭಾರತದ ಒಳಾಂಗಣ ಕ್ರಿಕೆಟ್ ತಂಡದ ಸದಸ್ಯರಾಗಿರುವ ಇವರು 2017ರ ಕ್ರಿಕೆಟ್ ವಿಶ್ವಕಪ್ ಜಯಿಸಿದ ಭಾರತದ ತಂಡದಲ್ಲಿದ್ದರು. 

ಸುದ್ದಿಗೋಷ್ಟಿಯಲ್ಲಿ ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ನಿಲಯದ ಅಮೃತೋತ್ಸವ ಸಮಿತಿ ಅಧ್ಯಕ್ಷರಾದ

ವೀಣಾ ಟಿ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ  ನಯನಾ ಶೆಟ್ಟಿ, ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ನಿಲಯದ ಸಂಚಾಲಕಿ ಶಾಲಿನಿ ಶೆಟ್ಟಿ, ಕೋಶಾಧಿಕಾರಿ ಸವಿತಾ ಚೌಟ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು