ಇತ್ತೀಚಿನ ಸುದ್ದಿ
ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ
04/07/2025, 20:01

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಕಳೆದೊಂದು ವಾರದಿಂದ ಅರಣ್ಯದಲ್ಲಿ ನಾಪತ್ತೆಯಾಗಿದ್ದ ಕೊಡಗು ಮೂಲದ ಫಾರೆಸ್ಟ್ ಗಾರ್ಡ್ ಶರತ್ (33) ಅವರ ಶವ ಪತ್ತೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ಮೀಸಲು ಅರಣ್ಯದ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದ ಶರತ್ ಮೃತದೇಹ ಸಖರಾಯಪಟ್ಟಣದ ಸಮೀಪದ ಹಳೇಹಟ್ಟಿ ತಾಂಡ್ಯ ಬಳಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹ ಕೊಳೆತ್ತಿರುವ ಹಿನ್ನಲೆಯಲ್ಲಿ ಸ್ಥಳದಲ್ಲೇ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು,
ಸಖರಾಯಾಪಟ್ಟಣ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.