6:38 PM Saturday4 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

ಇಂದಿನಿಂದ ಕರಾವಳಿಯಾದ್ಯಂತ ಮಿ.ಮದಿಮಯನ ಮದುವೆಯ ಗಮ್ಮತ್ತು

12/01/2024, 07:59

ಮಂಗಳೂರು(Reporterkarnataka.com)

ಮಂಗಳೂರು: ಎಮ್ ಎಮ್ ಎಮ್ ಗ್ರೂಫ್‌ ಬ್ಯಾನ‌ರ್ ನಡಿಯಲ್ಲಿ ನಿರ್ಮಾಣವಾದ “ಮಿಸ್ಟರ್ ಮದಿ ಮಯೆ” ತುಳು ಚಿತ್ರ ಜನವರಿ 12 ರಂದು ತೆರೆ ಕಾಣಲಿದೆ.

‘ಮಿಸ್ಟರ್ ಮದಿಮಯೆ ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಬಿಗ್ ಸಿನಿಮಾಸ್, ಸಿನಿಪೊಲಿಸ್, ಪಿವಿಆರ್, ಸುರತ್ಕಲ್‌ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರಿ ಯಲ್ಲಿ ಬಿಗ್ ಸಿನಿಮಾಸ್, ಉಡುಪಿ ಯಲ್ಲಿ ಕಲ್ಪನಾ, ಪುತ್ತೂರಿನಲ್ಲಿ ಭಾರತ್‌ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್, ಸುಳ್ಯದಲ್ಲಿ ಸಂತೋಷ್ ಚಿತ್ರ ಮಂದಿರದಲ್ಲಿ ಸಿನಿಮಾ ತೆರೆ ಕಾಣಲಿದೆ.
ಈ ಬಗ್ಗೆ ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿರುವ ಸಾಯಿಕೃಷ್ಣ ಕುಡ್ಲ ಮಾಹಿತಿಯನ್ನು ನೀಡಿದರು.

ಸಿನಿಮಾದ ನಟ ಪ್ರಕಾಶ್ ಪಾಂಡೇಶ್ವರ ಮಾತನಾಡಿ, ‘ಹೊಸಬರ ತಂಡ ಒಂದೊಳ್ಳೆಯ ಪ್ರಯತ್ನ ಮಾಡಿದೆ, ಎಲ್ಲರೂ ಸಿನಿಮಾ ನೋಡುವ ಮೂಲಕ ಪ್ರೋತ್ಸಾಹಿಸಿದಲ್ಲಿ ನಿರ್ಮಾಪಕರು ಇನ್ನಷ್ಟು ಸಿನಿಮಾ ಮಾಡ ಬಹುದು’ ಎಂದರು.

ಸಿನಿಮಾಕ್ಕೆ ಒಂದೇ ಹಂತದಲ್ಲಿ ಸುಮಾರು 20 ದಿನಗಳ ಕಾಲ ಚಿತ್ರೀಕರಣ ನಡೆದಿದ್ದು, ಮುಖ್ಯವಾಗಿ ಹೊಸ ಕಲಾವಿದರಿಗೆ ಅವಕಾಶ ನೀಡಲಾಗಿದೆ. ಪ್ರತಿಭಾವಂತರ ತಂಡ ಸೇರಿಕೊಂಡು ಕೆಲಸ ಮಾಡಿದೆ. ಸಾಯಿಕೃಷ್ಣ ಕುಡ್ಲರಂತಹ ಪ್ರಬುದ್ಧ ಕಲಾವಿದರೊಂದಿಗೆ ಹೊಸ ಹುಡುಗರು ಇಲ್ಲಿ ತೆರೆಯನ್ನು ಹಂಚಿಕೊಂಡಿದ್ದಾರೆ.

ನವೀನ್ ಜಿ. ಪೂಜಾರಿ ಅವರ ನಿರ್ದೇಶನದ ಈ ಸಿನಿಮಾದ ನಾಯಕನಾಗಿ ಸಾಯಿಕೃಷ್ಣ ಕುಡ್ಲ ಅವರು ನಟಿಸುತ್ತಿದ್ದಾರೆ. ಉಳಿದಂತೆ ಪ್ರಮುಖ ಪಾತ್ರಗಳಲ್ಲಿ ಶ್ವೇತಾ ಸುವರ್ಣ, ರವಿಕಾಂತ್ ಪೂಜಾರಿ, ಜ್ಯೋತಿಷ್ ಶೆಟ್ಟಿ, ಸುನೀಲ್ ನೆಲ್ಲಿಗುಡ್ಡೆ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಪಿಂಕಿ ರಾಣಿ, ರವಿ ರಾಮಕುಂಜ, ಪ್ರಕಾಶ್ ಪಾಂಡೇಶ್ವರ್, ಕಾಮಿಡಿ ಗ್ಯಾಂಗ್ ಖ್ಯಾತಿಯ ಮನೀಷ್ ಶೆಟ್ಟಿ ಉಪ್ಪಿರ, ಅಕ್ಷಯ್ ಸರಿಪಲ್ಲ, ಸಂದೀಪ್ ಶೆಟ್ಟಿ ರಾಯಿ, ಶರಣ್ ಕೈಕಂಬ, ಪ್ರವೀಣ್ ಮರ್ಕಮೆ, ಉತ್ಸವ್ ವಾಮಂಜೂರು, ಸವ್ಯರಾಜ್ ಕಲ್ಲಡ್ಕ, ಪ್ರಥ್ವಿನ್ ಪೊಳಲಿ ಮೊದಲಾದವರು ಬಣ್ಣ ಹಚ್ಚಿದ್ದಾರೆ.

ಮಿಥುನ್ ಕೆ.ಎಸ್. ನಿರ್ಮಾಪಕರಾಗಿರುವ ಈ ಚಿತ್ರಕ್ಕೆ ರಾಜೇಶ್ ಫೆರಾವೋ ಅವರು ಸಹ ನಿರ್ಮಾಪಕರಾಗಿ ಕೈ ಜೋಡಿಸಿದ್ದಾರೆ. ಚಿತ್ರಕ್ಕೆ ಕೆ.ಪಿ. ಮಿಲನ್ ಸಂಗೀತ ಹಾಗೂ ಪ್ರಶಾಂತ್ ಧರ್ಮಸ್ಥಳ ಅವರ ಛಾಯಾಗ್ರಹಣ ಇದೆ. ನವೀನ್ ಆರ್ಯನ್ ಮತ್ತು ವಿನೋದ್ ನೃತ್ಯ ಸಂಯೋಜಿಸಿದ್ದಾರೆ.

ಕೌರವ್ ವೆಂಕಟೇಶ್‌ರವರ ಸಾಹಸ, ಸುಕೇಶ್ ಶೆಟ್ಟಿ, ಜಿ.ಎಸ್ ಗುರುಪುರ ಅವರ ಸಾಹಿತ್ಯ, ಸುಜೀತ್ ನಾಯಕ್ ರವರ ಸಂಕಲನ ಇದೆ. ಚಿತ್ರವನ್ನು ಸಚಿನ್ ಎ. ಎಸ್. ಉಪ್ಪಿನಂಗಡಿ ಕರಾವಳಿ ಯಾದ್ಯಾಂತ ವಿತರಿಸುತ್ತಿದ್ದಾರೆ.

ವಸ್ತಾಲಂಕಾರ ನಿಖಿತಾ ಕೋಟ್ಯಾನ್, ನಿರ್ಮಾಣ ನಿರ್ವಾಹಕರಾಗಿ ಶ್ರೇಯಸ್ ಶೆಟ್ಟಿ, ಚಿತ್ರ ಮೇಲ್ವಿಚಾರಕರಾಗಿ ಹೆರಾಲ್ಡ್ ವಾಲ್ಟರ್, ಕಾರ್ಯಕಾರಿ ನಿರ್ಮಾ ಪಕರಾಗಿ ಸೌಮ್ಯ ಚೇತನ್ ಮತ್ತು ಸೌಜನ್ಯ ಶೆಟ್ಟಿ ಚಿತ್ರಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಚಿತ್ರದ ಕ್ರಿಯೆಟಿವ್ ಹೆಡ್ ಬಚ್ಚನ್ ಚೇತುರವರು ಚಿತ್ರದ ಪ್ರತಿ ಹಂತದಲ್ಲೂ ಬೆನ್ನೆಲುಬಾಗಿ ನಿಂತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು