11:55 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಶಾಸಕ ದರ್ಶನ್ ಧ್ರುವನಾರಾಯಣ್ ಗೆ ಸಚಿವ ಸ್ಥಾನ: ಅಭಿಮಾನಿಗಳ ಆಗ್ರಹ

02/06/2026, 19:19

ಮೋಹನ್ ನಂಜನಗೂಡು

info.reporterkarnataka@gmail.com

ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಗೆ ಸಚಿವ ಸ್ಥಾನ ನೀಡುವಂತೆ ತಾಲೂಕು ಯುವ ಘಟಕದ ಮಾಜಿ ಅಧ್ಯಕ್ಷ ದೇಬೂರು ಅಶೋಕ್ ಹಾಗೂ ದಿವಂಗತ ಆರ್. ಧ್ರುವನಾರಾಯಣ್ ಅಭಿಮಾನಿಗಳು ಮತ್ತು ಶಾಸಕ ದರ್ಶನ್ ಧ್ರುವನಾರಾಯಣ್ ಬೆಂಬಲಿಗರು ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ.
ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮೂರು ವರ್ಷ ಅಧಿಕಾರ ನಡೆಸಿ ಕೊಟ್ಟ ಮಾತಿನಂತೆ ಹೈಕಮಾಂಡ್ ಹಾಗು ವರಿಷ್ಠರ ಮಾತಿನಂತೆ ರಾಜೀನಾಮೆ ನೀಡಿ ಉಪಮುಖ್ಯಮಂತ್ರಿಗಳಾಗಿದ್ದ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಕಲ್ಪಿಸಿ ಇದೆ ಬುಧವಾರ ಜೂನ್ ಮೂರರಂದು ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಹಾಗಾಗಿ ನೂತನ ಮುಖ್ಯಮಂತ್ರಿಗಳ ಸಚಿವ ಸಂಪುಟದಲ್ಲಿ ಅತ್ಯಂತ ಕಿರಿಯ ವಯಸ್ಸಿನಲ್ಲೇ ಶಾಸಕರಾಗಿ ಕಡಿಮೆ ಅವಧಿಯಲ್ಲಿ ಕ್ಷೇತ್ರಕ್ಕೆ ನೂರಾರು ಕೋಟಿ ಅನುದಾನ ತಂದು ಉತ್ತಮ ಕೆಲಸ ಮಾಡುತ್ತಾ ಕ್ಷೇತ್ರದ ಜನರ ಮನೆಮಾತಾಗಿರುವ ದರ್ಶನ್ ಧ್ರುವನಾರಾಯಣ್ ಅವರಿಗೆ ಸಚಿವ ಸ್ಥಾನ ನೀಡಿದರೆ ಪಕ್ಷದ ಸಂಘಟನೆಗೆ ಅನುಕೂಲವಾಗುತ್ತದೆ ಎಂದರು.


ಅಲ್ಲದೆ ಅವರ ತಂದೆ ದಿವಂಗತ ಆರ್ ಧ್ರುವನಾರಾಯಣ ಅವರು ಈ ಭಾಗದಲ್ಲಿ ಶಾಸಕರಾಗಿ, ಸಂಸದರಾಗಿ ಒಳ್ಳೆಯ ಸಂಸದೀಯ ಪಟುವಾಗಿ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರಾಗಿ ಪಕ್ಷದ ಸಂಘಟನೆಗೆ ತಮ್ಮ ಜೀವವನ್ನೇ ತ್ಯಾಗ ಮಾಡಿ ಈ ಭಾಗದಲ್ಲಿ ಹೆಚ್ಚು ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕೆಲಸ ಮಾಡಿ ಅಕಾಲಿಕ ಮರಣ ಹೊಂದಿರುತ್ತಾರೆ ಹಾಗಾಗಿ ಪಕ್ಷದಲ್ಲಿ ಅವರ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಅವರ ಮಗ ದರ್ಶನ್ ಧ್ರುವನಾರಾಯಣ್ ಅವರಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿದರು.
ಮುಖಂಡ ಬಾಲರಾಜ್ ಮಾತನಾಡಿ ಮುಂದಿನ ಸಚಿವ ಸಂಪುಟದಲ್ಲಿ ನಮ್ಮ ಕ್ಷೇತ್ರದ ಶಾಸಕ ದರ್ಶನ್ ದ್ರುವನಾರಾಯಣ್ ಸೇರಿದಂತೆ ಕನಿಷ್ಠ 10 ಮಂದಿ ಹೊಸ ಯುವಕರಿಗೆ ಸಚಿವ ಸ್ಥಾನ ನೀಡುವಂತೆ ಪಕ್ಷದ ವರಿಷ್ಠರನ್ನು ಒತ್ತಾಯಿಸಿದರು.
ಗೋಷ್ಠಿಯಲ್ಲಿ ಮುಖಂಡರುಗಳಾದ ಹೇಮಂತ್, ಅಜಯ್, ಸೋಮೇಶ್, ಮಂಜು,ಆನಂದ್,ವೆಂಕಟೇಶ್, ನವೀನ, ಮೊಹಮ್ಮದ್ ಸಮೀ ಸೇರಿದಂತೆ ಹಲವಾರು ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು