12:48 PM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ ಬಿಡುಗಡೆ

22/07/2026, 20:53

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ದಕ್ಷಿಣ ಭಾರತದ ಜೀವನದಿ ಎಂದೇ ಖ್ಯಾತವಾಗಿರುವ ಕಾವೇರಿಯ ಸನ್ನಿಧಿ ಭಾಗಮಂಡಲದ ಮೇಲ್ಸೇತುವೆ ಹಾಗೂ ಸುತ್ತಮುತ್ತಲಿನ ಅಭಿವೃದ್ಧಿ ಕಾಮಗಾರಿಗೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ನವರ ಕೋರಿಕೆ ಮೇರೆಗೆ ಕಾವೇರಿ ನೀರಾವರಿ ನಿಗಮದಿಂದ 3 ಕೋಟಿ ರೂಗಳ ಬರಪೂರ ಅನುದಾನ ಬಿಡುಗಡೆಯಾಗಿದ್ದು
ಟೆಂಡರ್ ಪ್ರಕೃಯೆ ಪೂರ್ಣಗೊಂಡು ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿದೆ ಎಂದು ಕಾವೇರಿ ನೀರಾವರಿ ನಿಗಮದಿಂದ ಮಾಹಿತಿ ಲಭ್ಯವಾಗಿದೆ.


ಮೇಲ್ಸೇತುವೆ ಆವರಣದ ಸುಧಾರಣೆಗಳು,ನೀರು ಹರಿಯುವ ಪೈಪ್ ಗಳ ಸುಧಾರಣೆ,ಮೇಲ್ಸೇತುವೆ ಕೆಳಗೆಕಾಂಕ್ರೀಟ್ ಕಾಮಗಾರಿ,ಕನ್ನಿಕೆ ನದಿಗೆ ಪಾದಚಾರಿ ಸೇತುವೆ,ಕಾವೇರಿ ನದಿಗೆ ಪಾದಚಾರಿ ಸೇತುವೆ ಕಾಮಗಾರಿಗಳು ಉಲ್ಲೇಖಿತ ಅನುದಾನದಲ್ಲಿ ನಡೆಯಲಿದ್ದು ಬೆಂಗಳೂರಿನ ಪ್ರಥಮ ದರ್ಜೆ ಗುತ್ತಿಗೆದಾರ ಕೆ.ರೋಹಿತ್ ರವರು ಗುತ್ತಿಗೆ ಪಡೆದಿದ್ದು 2026ರ ಅಕ್ಟೋಬರ್ ಅಂತ್ಯದ ಒಳಗೆ ಕಾಮಗಾರಿ ಪೂರ್ಣಗೊಳಿಸಿ ಹಸ್ತಾಂತರ ಮಾಡುವಂತೆ ನಿಗಮದ ಆದೇಶದಲ್ಲಿ ಸೂಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು