8:35 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು…

ಇತ್ತೀಚಿನ ಸುದ್ದಿ

ಎಂಎಂ ಹಿಲ್ಸ್ | ಮತ್ತೊಂದು ಹುಲಿ ಹತ್ಯೆ: ಪಿಸಿಸಿಎಫ್ ತಂಡದ ತನಿಖೆಗೆ ಅರಣ್ಯ ಸಚಿವ ಖಂಡ್ರೆ ಆದೇಶ

03/10/2025, 12:49

ಬೆಂಗಳೂರು(reporterkarnataka.com): ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ.
ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಲಿಖಿತ ಆದೇಶ ನೀಡಿರುವ ಅವರು, ಮಲೆ ಮಹದೇಶ್ವರ ಬೆಟ್ಟದ ಕಾನನದ ಹನೂರು ವಲಯದ, ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ ಗ್ರಾಮದ ಬಳಿ ನಿನ್ನೆ ಸತ್ತ ಹುಲಿಯ ಅರ್ಧ ಕಳೇಬರ ಪತ್ತೆಯಾಗಿರುವ ಬಗ್ಗೆ ಪಿಸಿಸಿಎಫ್ ಸ್ಮಿತಾ ಬಿಜ್ಜೂರು ಅವರ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಆದೇಶಿಸುವಂತೆ ಸೂಚಿಸಿದ್ದಾರೆ.
ಈ ಕಾನನದಲ್ಲಿ ಕಳೆದ 3 ವರ್ಷದಲ್ಲಿ ದಾಖಲಾಗಿರುವ ಕಳ್ಳಬೇಟೆ ಪ್ರಕರಣಗಳ ಬಗ್ಗೆಯೂ ಗಮನ ಹರಿಸಿ, ಹಿಂದಿನ ತನಿಖಾ ವರದಿಗಳನ್ನೂ ಪರಾಮರ್ಶಿಸಿ ಮುಂದೆ ಈ ಭಾಗದಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮವಹಿಸಲು, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಹಾಗೂ ಕಳ್ಳಬೇಟೆಗಾರರ ವಿರುದ್ಧ ಸೂಕ್ತ ಕ್ರಮದ ಶಿಫಾರಸಿನೊಂದಿಗೆ 8 ದಿನಗಳಲ್ಲಿ ವರದಿ ಸಲ್ಲಿಸಲು ಮತ್ತು ಹುಲಿ ಹಂತಕರನ್ನು ಪತ್ತೆಮಾಡಿ ಅವರಿಗೆ ಕಾನೂನು ರೀತ್ಯ ದಂಡನೆ ಕೊಡಿಸಲು ತುರ್ತು ಕ್ರಮ ವಹಿಸಲು ಆದೇಶ ಹೊರಡಿಸುವಂತೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ.
ಈ ಘಟನೆ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ಧಾಮದಲ್ಲಿ ನಿರಂತರವಾಗಿ ವನ್ಯಜೀವಿಗಳ ಕಳ್ಳಬೇಟೆ ನಡೆಯುತ್ತಿರುವುದನ್ನು ದೃಢಪಡಿಸುತ್ತಿದ್ದು ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಚಿತ್ರ: ಸಾಂದರ್ಭಿಕ

ಇತ್ತೀಚಿನ ಸುದ್ದಿ

ಜಾಹೀರಾತು