4:23 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಮಂಗಳೂರು ದಕ್ಷಿಣ ಎಎಪಿ ಅಭ್ಯರ್ಥಿ ಸಂತೋಷ್ ಕಾಮತ್ ಸಹಿತ 17ಅಭ್ಯರ್ಥಿಗಳಿಂದ 18 ನಾಮಪತ್ರ ಸಲ್ಲಿಕೆ

19/04/2023, 22:18

ಮಂಗಳೂರು(reporterkarnataka.com):
ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಬುಧವಾರ 6 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 17 ಅಭ್ಯರ್ಥಿಗಳು 18 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸಂತೋಷ್ ಕಾಮತ್ ನಾಮಪತ್ರ ಸಲ್ಲಿಸಿದ್ದಾರೆ.

ವಿವರ ಹೀಗಿದೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಮಹೇಶ್ ನಾಮಪತ್ರ ಸಲ್ಲಿಸಿದ್ದಾರೆ. ಮೂಡುಬಿದರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರ ಎಸ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ದಯಾನಂದ, ಪಕ್ಷೇತರ ಅಭ್ಯರ್ಥಿಯಾಗಿ ಮ್ಯಾಕ್ಸಿಂ ಪಿಂಟೋ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಎಚ್. ವಿನಯ್ ಆಚಾರ್ಯ, ಹಿಂದುಸ್ತಾನ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಬಿ. ಪ್ರವೀಣ್ ಚಂದ್ರರಾವ ಹಾಗೂ
ಆಮ್ ಆದ್ಮಿ ಪಕ್ಷದಿಂದ ಸಂದೀಪ್ ಶೆಟ್ಟಿ ನಾಮಪತ್ರ ಸಲ್ಲಿಸಿದ್ದಾರೆ.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸಂತೋಷ್ ಕಾಮತ್, ಅಖಿಲ ಭಾರತ ಹಿಂದೂ ಮಹಾಸಭಾ ಅಭ್ಯರ್ಥಿಯಾಗಿ ಧರ್ಮೇಂದ್ರ, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ನಿತಿನ್ ಕುಮಾರ್, ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾಗಿ ವಿನ್ಸಿ ಪಿಂಟೋ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಡಿಪಿಐ ಅಭ್ಯರ್ಥಿಯಾಗಿ ಇಸ್ಮಾಯಿಲ್ ಕೆ. ಶಫಿ, ಎಸ್‌ಡಿಪಿಐ ಅಭ್ಯರ್ಥಿಯಾಗಿ ಪಿ. ಇಬ್ರಾಹಿಂ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ 2 ಸೆಟ್ ನಾಮಪತ್ರಗಳನ್ನು ಸಲ್ಲಿಸಿದರೆ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಐವಾನ್ ಪೇರಾವೋ ಪಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಸುಂದರ ಕೋಯಿಲಾ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ಎಚ್. ವೆಂಕಟೇಶ್ ನಾಮಪತ್ರ ಸಲ್ಲಿಸಿದ್ದಾರೆ.
ಮಂಗಳೂರು ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ನಾಮಪತ್ರಗಳು ಸ್ವೀಕೃತವಾಗಿಲ್ಲ, ನಾಮಪತ್ರಗಳ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು