4:52 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಮೊಬೈಲ್ ಚಿತ್ರೀಕರಣ ಪ್ರಕರಣ ಎಸ್ಐಟಿಗೆ ಹಸ್ತಾಂತರಿಸುವ ಪ್ರಶ್ನೆ ಇಲ್ಲ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ

01/08/2023, 15:30

ಮಂಗಳೂರು(reporterkarnataka.com):ಉಡುಪಿಯ ಖಾಸಗಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದ ಪ್ರಕರಣವನ್ನು ಎಸ್ಐಟಿಗೆ ವಹಿಸುವ ಪ್ರಶ್ನೆಯೇ ಇಲ್ಲ. ಪೊಲೀಸರು ಈಗಾಗಲೇ ಸುಮೊಟೋ ಪ್ರಕರಣ ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನುಡಿವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಮಂಗಳವಾರ ಮಂಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿ, ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ. ತನಿಖೆಯಾಗಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.
ಗೃಹ ಸಚಿವರು ಈ ಪ್ರಕರಣವನ್ನು ಮಕ್ಕಳಾಟಿಕೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮಕ್ಕಳಾಟಿಕೆಯಾಗಿದಿದ್ದರೆ ಪ್ರಕರಣ ದಾಖಲಾಗುತ್ತಿತ್ತೆ ಎಂದರು. ಕಾಲೇಜಿನ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಎಂದಿರಬಹುದು. ಆದರೆ ಪ್ರಕರಣ ದಾಖಲಾಗಿದ್ದು, ಎಫ್ ಐಆರ್ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದರು. ಡಿವೈಎಸ್ಪಿ ಮಟ್ಟದ ಅಧಿಕಾರಿ ತನಿಖೆ ನಡೆಸುತ್ತಿದ್ದಾರೆ ಎಂದ ಮೇಲೆ ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯಮಂತ್ರಿ ನುಡಿದರು.
ಕರಾವಳಿ ಭಾಗಕ್ಕೆ ನೀಡಿರುವ ಸೌಲಭ್ಯಗಳನ್ನು ಬಜೆಟ್ ನಲ್ಲಿ ತಿಳಿಸಲಾಗಿದೆ. ಜುಲೈ ತಿಂಗಳಲ್ಲಿ ಉಡುಪಿ, ಮಂಗಳೂರು, ಕರಾವಳಿ ಪ್ರದೇಶದಲ್ಲಿ ಮಳೆಯಾಗಿದ್ದು, ಹಾನಿಯಾಗಿರುವ ಪ್ರದೇಶಗಳನ್ನು ವೀಕ್ಷಿಸಲು ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸಲು ಆಗಮಿಸಿರುವುದಾಗಿ ಮುಖ್ಯಮಂತ್ರಿಗಳು ನುಡಿದರು.
ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಕೂಡ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ.
ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳುವಂತಿಲ್ಲ ಎಂದು ಪೊಲೀಸರಿಗೆ ಸೂಚಿಸಲಾಗಿದೆ ಎಂದರು.
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುವುದು. ಕಾನೂನಿನ ಪ್ರಕಾರ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ ಎಂದರು. ಅಧಿಕಾರಿಗಳಿಂದ ಲೋಪವಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖವಿರುವ ಬಗ್ಗೆ ಉತ್ತರಿಸಿ, ತೀರ್ಪು ಓದಿದ ನಂತರ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು ಎಂದರು.
ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಅಥವಾ ವ್ಯಕ್ತಿ ಯ ವಿರುದ್ಧವಾಗಿ ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಟೀಕೆ ಮಾಡಿದರೂ ಕ್ರಮ ಕೈಗೊಳ್ಳುತ್ತಿದ್ದೀರಿ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಟೀಕೆ ಮಾಡಿದರೆ ಕ್ರಮ ತೆಗೆದುಕೊಳ್ಳುವುದಿಲ್ಲ. ಸುಳ್ಳು ಸುದ್ದಿ ಹಬ್ಬಿಸಿದರೆ ತೆಗೆದುಕೊಳ್ಳಲಾಗುವುದು ಎಂದರು. ಕುಟುಂಬದವರ ಮೇಲೆ ಸುಳ್ಳು ಸುದ್ದಿ ಹಬ್ಬಿಸುವುದು, ವೈಯಕ್ತಿಕವಾಗಿ ತೇಜೋವಧೆ ಮಾಡುವುದು ಬೇರೆ ಎಂದರು.
ಕಸ್ತೂರಿ ರಂಗನ್ ವರದಿ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಬೇಕಿದೆ. ಪರಿಸರ ಸಂರಕ್ಷಣೆ ಯ ವಿಚಾರದಲ್ಲಿ ಸರ್ಕಾರ ಹಿಂದೆಬೀಳುವುದಿಲ್ಲ ಎಂದರು.
ಬಿಟ್ ಕಾಯಿನ್ ವಿಚಾರದಲ್ಲಿ ಎಸ್.ಐ.ಟಿ ವತಿಯಿಂದ ಇನ್ನೂ ಯಾರಿಗೂ ನೋಟೀಸು ಹೋಗದಿರುವ ಬಗ್ಗೆ ಮಾತನಾಡಿ ಎಸ್.ಐ.ಟಿ ಕ್ರಮವನ್ನು ವಹಿಸುತ್ತದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು