10:08 AM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮೊಬೈಲ್ ನಲ್ಲಿ ಮಾತನಾಡುತ್ತಾ ಮಲಗಿದವರ ಮೇಲೆ ಟಪರ್ ಚಲಾಯಿಸಿದ ಚಾಲಕ: ಓರ್ವ ಸ್ಥಳದಲ್ಲೇ ಸಾವು; ಇನ್ನೋರ್ವ ಗಂಭೀರ

24/11/2023, 20:54

ಹೆಬ್ರಿ(reporterkarnataka.com): ಸೋಮೇಶ್ವರದ ಪೆಟ್ರೋಲ್‌ ಬಂಕಿನಲ್ಲಿ ಮಲಗಿದ್ದ ಇಬ್ಬರ ಮೇಲೆ ಟಿಪ್ಪರ್ ಹರಿದು ಓರ್ವ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಭೀಕರ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು
ಸಾಗರ ತಾಲೂಕಿನ ಶಿವರಾಜ್(38) ಎಂದು ಗುರುತಿಸಲಾಗಿದೆ. ಮಹೇಂದ್ರ ಎಂಬವರು ಈ ದುರ್ಘಟನೆಯಿಂದ ಗಂಭೀರ ಗಾಯಗೊಂಡಿದ್ದಾರೆ.
ಸಾಗರ ಕಡೆಯಿಂದ ಬಾಳೆಕಾಯಿ ತುಂಬಿಸಿಕೊಂಡು ಬಂದಿದ್ದ ಶಿವರಾಜ್ ಹಾಗೂ ಮಹೇಂದ್ರ ರಾತ್ರಿ ವೇಳೆ ಸೋಮೇಶ್ವರದ ಪೆಟ್ರೋಲ್ ಬಂಕ್ ನಲ್ಲಿ ಟಾಟಾ ಏಸ್ ವಾಹನವನ್ನು ನಿಲ್ಲಿಸಿ ವಾಹನದ ಮುಂದೆ ಮಲಗಿದ್ದರು. ಮುಂಜಾನೆ 6 ಗಂಟೆ ಸುಮಾರಿಗೆ ಟಿಪ್ಪರ್ ಚಾಲಕನೋರ್ವ ಡೀಸೆಲ್ ತುಂಬಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಮಲಗಿದ್ದವರ ಮೇಲೆಯೇ ಚಲಾಯಿಸಿಕೊಂಡು ಹೋದ ಪರಿಣಾಮ ಶಿವರಾಜ್ ಸ್ಥಳದಲ್ಲೇ ಮೃತಪಟ್ಟರೆ, ಮಹೇಂದ್ರ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಟಿಪ್ಪರ್ ಚಾಲಕ ಮೊಬೈಲ್‌ ನಲ್ಲಿ ಮಾತನಾಡಿಕೊಂಡು ಟಿಪ್ಪರ್ ಚಲಾಯಿಸಿರುವುದೇ ದುರಂತಕ್ಕೆ ಕಾರಣ ಎನ್ನಲಾಗಿದೆ.
ಅಪಘಾತದ ಭೀಕರ ದೃಶ್ಯ ಪೆಟ್ರೋಲ್ ಬಂಕಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಘಟನಾ ಸ್ಥಳಕ್ಕೆ ಹೆಬ್ರಿ ಪೊಲೀಸರು ಭೇಟಿ ನೀಡಿದ್ದು,ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು