8:10 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮೊಬೈಲ್ ಟವರ್ ಬ್ಯಾಟರಿ ಕಳ್ಳತನ ; ಕೇರಳದ ವ್ಯಕ್ತಿ ಬಂಧನ

18/09/2025, 07:09

ಪುತ್ತೂರು(Reporterkarnataka.com): ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನರಿಮೊಗರು ಗ್ರಾಮದ ಪುರುಷರಕಟ್ಟೆಯ ಮೊಬೈಲ್ ಟವರ್‌ನಿಂದ ಬ್ಯಾಟರಿಗಳನ್ನು ಕಳವು ಮಾಡಿದ ಪ್ರಕರಣದಲ್ಲಿ, ಕೇರಳದ ಕೊಲ್ಲಂ ನಿವಾಸಿ ಇಟ್ಟಿ ಫನಿಕ್ಕರ್ (60) ಎಂಬಾತನನ್ನು ಪೊಲೀಸರು ಬಂಧಿಸಿ, ಕಳವುಗೈದ ಬ್ಯಾಟರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಸೆ. 7ರಿಂದ 13ರ ನಡುವೆ ಮೊಬೈಲ್ ಟವರ್‌ಗೆ ಅಳವಡಿಸಿದ್ದ ಬ್ಯಾಟರಿಗಳನ್ನು ಕಳವು ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 79/2025, ಕಲಂ 331(3), 331(4), 305 BNS 2023ರಂತೆ ಪ್ರಕರಣ ದಾಖಲಿಸಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಇಟ್ಟಿ ಫನಿಕ್ಕರ್ ಎಂಬಾತನನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿದರು. ವಿಚಾರಣೆ ವೇಳೆ ಅವನು ಕಳವುಗೈದಿರುವುದನ್ನು ಒಪ್ಪಿಕೊಂಡಿದ್ದು, ಪೊಲೀಸರು ಎಲ್ಲಾ ಬ್ಯಾಟರಿಗಳನ್ನು ಮರುಸ್ವಾಧೀನಪಡಿಸಿಕೊಂಡಿದ್ದಾರೆ.

ಬಂಧಿತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು