7:48 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ…

ಇತ್ತೀಚಿನ ಸುದ್ದಿ

ಮೊಬೈಲ್ ಟವರ್ ಬ್ಯಾಟರಿ ಕಳ್ಳತನ ; ಕೇರಳದ ವ್ಯಕ್ತಿ ಬಂಧನ

18/09/2025, 07:09

ಪುತ್ತೂರು(Reporterkarnataka.com): ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನರಿಮೊಗರು ಗ್ರಾಮದ ಪುರುಷರಕಟ್ಟೆಯ ಮೊಬೈಲ್ ಟವರ್‌ನಿಂದ ಬ್ಯಾಟರಿಗಳನ್ನು ಕಳವು ಮಾಡಿದ ಪ್ರಕರಣದಲ್ಲಿ, ಕೇರಳದ ಕೊಲ್ಲಂ ನಿವಾಸಿ ಇಟ್ಟಿ ಫನಿಕ್ಕರ್ (60) ಎಂಬಾತನನ್ನು ಪೊಲೀಸರು ಬಂಧಿಸಿ, ಕಳವುಗೈದ ಬ್ಯಾಟರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಸೆ. 7ರಿಂದ 13ರ ನಡುವೆ ಮೊಬೈಲ್ ಟವರ್‌ಗೆ ಅಳವಡಿಸಿದ್ದ ಬ್ಯಾಟರಿಗಳನ್ನು ಕಳವು ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 79/2025, ಕಲಂ 331(3), 331(4), 305 BNS 2023ರಂತೆ ಪ್ರಕರಣ ದಾಖಲಿಸಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಇಟ್ಟಿ ಫನಿಕ್ಕರ್ ಎಂಬಾತನನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿದರು. ವಿಚಾರಣೆ ವೇಳೆ ಅವನು ಕಳವುಗೈದಿರುವುದನ್ನು ಒಪ್ಪಿಕೊಂಡಿದ್ದು, ಪೊಲೀಸರು ಎಲ್ಲಾ ಬ್ಯಾಟರಿಗಳನ್ನು ಮರುಸ್ವಾಧೀನಪಡಿಸಿಕೊಂಡಿದ್ದಾರೆ.

ಬಂಧಿತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು