ಇತ್ತೀಚಿನ ಸುದ್ದಿ
ಮೊಡಂಕಾಪು ಕಾರ್ಮೆಲ್ ಕಾಲೇಜಿನ 2023-24ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ
24/09/2023, 18:00
ಬಂಟ್ವಾಳ (reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ 2023-24ನೇ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನುಉದ್ಘಾಟಿಸಿದ ಮಂಗಳೂರುವಿಶ್ವವಿದ್ಯಾನಿಲಯದ ಸಂಶೋಧಕಿ ಮಧುರ ಕೆ. ಮಾತನಾಡಿ ಅವರು ಎನ್ನೆಸ್ಸೆಸ್ ನ ಮಹತ್ವವನ್ನು ತಿಳಿಸುವುದರೊಂದಿಗೆ, ಸಮಾಜದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಪ್ರಮುಖವಾದದ್ದು ಎಂಬ ಮಾಹಿತಿಯನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ಲತಾ ಫೆರ್ನಾಂಡಿಸ್ ಎ. ಸಿ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಸಿದ್ದರು.
ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಜೇತ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕರಾದ ಪ್ರೇಕ್ಷಾ ಹಾಗೂ ಅಪ್ರಸ್
ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕರಿಗೆ ಎನ್ ಎಸ್ ಎಸ್ ಬಾವುಟವನ್ನು ಹತ್ತಾಂತರಿಸಿ, ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮವನ್ನು ನೆರವೇರಿಸಿ ಕೊಟ್ಟರು. ಜೊಸ್ವಿಟ ಕಾರ್ಯಕ್ರಮವನ್ನು ನಿರೂಪಿಸಿದರು, ಪ್ರೇಕ್ಷಾ ಸ್ವಾಗತಿಸಿದರು. ಅಪ್ರಸ್ ವಂದಿಸಿದರು.