7:27 AM Sunday23 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

02/12/2023, 09:45

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ 2023-24ನೇ ಸಾಲಿನ ರಾಷ್ಟೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಅಮ್ಟಾಡಿ ಕಿನ್ನಿಬೆಟ್ಟು ದ. ಕ. ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.


ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಇನ್ಫ್ಯಾಂಟ್ ಜೀಸಸ್ ಚರ್ಚ್ ಧರ್ಮಗುರುಗಳಾದ ವಂ| ವಲೇರಿಯನ್ ಡಿಸೋಜ,
ಮೊಡಂಕಾಪು ಕಾರ್ಮೆಲ್ ಕಾಲೇಜು ಪ್ರಾಂಶುಪಾಲರಾದ
ಡಾ. ಲತಾ ಫೆರ್ನಾಂಡಿಸ್ ಎ ಸಿ,ಅಮ್ಟಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ್ ಕುಮಾರ್,ಅಮ್ಟಾಡಿ ಗ್ರಾಮ ಪಂಚಾಯತ್
ಉಪಾಧ್ಯಕ್ಷರಾದ ಮೋಹಿನಿ,ಅಮ್ಟಾಡಿ ಗ್ರಾಮ ಪಂಚಾಯತ್
ಅಭಿವೃದ್ಧಿ ಅಧಿಕಾರಿ ರವಿ,ಕಿನ್ನಿಬೆಟ್ಟು ದ. ಕ. ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯಿನಿ ಆರತಿ ಅಮೀನ್, ಅಮ್ಟಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುನಿಲ್ ಕುಮಾರ್, ಯಶವಂತ್ ಶೆಟ್ಟಿ, ನೆಲ್ಸನ್ ಕಿರಣ್ ಪಿಂಟೋ, ಭಾರತೀ ಚೌಟ ಹಾಗೂ ಸುನಿಲ್ ವೇಗಸ್,ಮೊಡಂಕಾಪು ಇನ್ಫ್ಯಾಂಟ್ ಜೀಸಸ್ ಚರ್ಚ್ ನ ಉಪಾಧ್ಯಕ್ಷರು ಮನೋಹರ್,ಮೊಡಂಕಾಪು ಇನ್ ಫೆಂಟ್ ಜೀಸಸ್ ಚರ್ಚ್ ಕಾರ್ಯದರ್ಶಿ ವಂ| ಭ| ರೊಸಿಲ್ಡ್, ಕಾರ್ಮೆಲ್ ವಿದ್ಯಾಸಂಸ್ಥೆಯ ಜಂಟಿ ಕಾರ್ಯದರ್ಶಿ ವಂ|ಭ| ನವೀನ ಎ ಸಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಸಕ ರಾಜೇಶ್ ನಾಯ್ಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮನು ಹೆಚ್ಚಿನ ರೀತಿಯಲ್ಲಿ ಎನ್ ಎಸ್ ಎಸ್ ನಲ್ಲಿ ತೊಡಗಿಸಿಕೊಂಡು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂಬ ಸಂದೇಶವನ್ನು ನೀಡಿದರು.
ವಂ| ವಲೇರಿಯನ್ ಡಿಸೋಜ, ಧರ್ಮಗುರುಗಳು ಇನ್ಫ್ಯಾಂಟ್ ಜೀಸಸ್ ಚರ್ಚ್, ಆಶೀರ್ವಚನ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅಷಫಿಯ ಕಾರ್ಯಕ್ರಮದ ನಿರೂಪಣೆ ಮಾಡಿದರು.
ಮೊಡಂಕಾಪು ಕಾರ್ಮೆಲ್ ಕಾಲೇಜಿನ ಪ್ರಾಂಶುಪಾಲರಾದ
ಡಾ. ಲತಾ ಫೆರ್ನಾಂಡಿಸ್ ಎ ಸಿ, ಸ್ವಾಗತಿಸಿದರು. ರಾಷ್ಟೀಯ ಸೇವಾ ಯೋಜನಾಧಿಕಾರಿ ವಿಜೇತಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು