10:00 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜು ಮೈದಾನದಲ್ಲಿ ‘ನನ್ನ ಮಣ್ಣು ನನ್ನ ದೇಶ’ ಅಮೃತ ಕಳಶ ಯಾತ್ರೆ ಕಾರ್ಯಕ್ರಮ

12/10/2023, 21:36

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಬಂಟ್ವಾಳ ತಾಲೂಕು ಪಂಚಾಯತ್ , ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ “ನನ್ನ ಮಣ್ಣು ನನ್ನ ದೇಶ ” ಅಮೃತ ಕಳಶ ಯಾತ್ರೆ ಕಾರ್ಯಕ್ರಮ ಕಾಲೇಜಿನ ಮೈದಾನದಲ್ಲಿ ಜರುಗಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಡಾ. ಲತಾ ಫೆರ್ನಾಂಡಿಸ್ ಎ.ಸಿ., ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಜೇತಾ ಎ, ಸುರೇಶ್ ರೈ ಸೂಡಿಮುಳ್ಳು, (ಪ್ರಧಾನ ಕಾರ್ಯದರ್ಶಿ ರಾಜ್ಯ ಯುವಜನ ಒಕ್ಕೂಟ ಬೆಂಗಳೂರು), ಶ್ರೀಕಾಂತ್ ಪೂಜಾರಿ ಬಿರಾವು (ಜಿಲ್ಲಾ ತರಬೇತುದಾರರು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ), ಸುಬ್ರಹ್ಮಣ್ಯ ಕರಂಬಾರು (ಗೌರವ ಅಧ್ಯಕ್ಷರು ತಾಲೂಕು ಯುವಜನ ಒಕ್ಕೂಟ ಪುತ್ತೂರು), ಶ್ರೀ ನಿಧಿಶ್ (ತಾಲೂಕು ಪ್ರತಿನಿಧಿ ನೆಹರು ಯುವ ಕೇಂದ್ರ ಮಂಗಳೂರು), ಗುರುಪ್ರಿಯ ಕಾಮತ್, (ಸಾಂಸ್ಕೃತಿಕ ಕಾರ್ಯದರ್ಶಿ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು), ವಿಶ್ವನಾಥ (ಸಹಾಯಕ ನಿರ್ದೇಶಕರು ತಾಲೂಕು ಪಂಚಾಯತ್ ಬಂಟ್ವಾಳ), ಶಾಂಭವಿ ಎಸ್. ರಾವ್ (ಮ್ಯಾನೇಜರ್), ಸಿಬ್ಬಂದಿಗಳಾದ ಚಂದ್ರಾವತಿ, ಪ್ರಶಾಂತ್, ಮುರಳೀಧರ, ಟ್ರೆಸ್ಸಿ ರೋಡ್ರಿಗಸ್, ಮನೋರಂಜನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಅಮೃತ ಕಳಶದೊಂದಿಗೆ ಜಾಥಾವನ್ನು ಮಾಡಲಾಯಿತು. ಇದರಲ್ಲಿ ತಾಲೂಕು ಪಂಚಾಯತ್ ಸಿಬ್ಬಂದಿಗಳು, ಯುವಜನ ಒಕ್ಕೂಟ, ರಾಷ್ಟ್ರೀಯ ಸ್ವಯಂಸೇವಕರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು