ಇತ್ತೀಚಿನ ಸುದ್ದಿ
ಮೋದಿ ಪ್ರಮಾಣ ವಚನಕ್ಕೆ ಕ್ಷಣಗಣನೆ ಆರಂಭ: ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಸೇರಿದಂತೆ ರಾಜ್ಯದಿಂದ 5 ಮಂದಿಗೆ ಸಚಿವ ಸ್ಥಾನ?
09/06/2024, 15:54

ನವದೆಹಲಿ(reporterkarnataka.com): ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರಕಾರದ ಪ್ರತಿಜ್ಞೆ ಸ್ವೀಕಾರ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದಿಂದ 5 ಮಂದಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯದಿಂದ ಕ್ಯಾಬಿನೆಟ್ ಖಾತೆ ಸಚಿವರಾಗಿ ಪ್ರಹ್ಲಾದ್ ಜೋಶಿ, ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಮತ್ತು ಜೆಡಿಎಸ್‌ನ ಎಚ್.ಡಿ. ಕುಮಾರಸ್ವಾಮಿ ಅವರು ಅಧಿಕಾರ ವಹಿಸಲಿದ್ದಾರೆ. ಶೋಭಾ ಕರಂದ್ಲಾಜೆ ಮತ್ತು ಗೋವಿಂದ ಕಾರಜೋಳ ಅಥವಾ ವಿ.ಸೋಮಣ್ಣ ಅವರಿಗೆ ರಾಜ್ಯ ಖಾತೆ ಸಿಗಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ರಾಜ್ಯದ ಐವರು ಸಂಪುಟ ಸಭೆ ಸೇರಲಿದ್ದಾರೆ ಎನ್ನಲಾಗುತ್ತಿದ್ದು, ಅಚ್ಚರಿ ಎನ್ನುವಂತೆ ತುಮಕೂರು ಲೋಕಸಭಾ ಕ್ಷೇತ್ರದ ಸಂಸದ ವಿ.ಸೋಮಣ್ಣ ಅವರು ಮೋದಿ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಿಂದ ಕ್ಯಾಬಿನೆಟ್ ಖಾತೆ ಸಚಿವರಾಗಿ ಪ್ರಹ್ಲಾದ್ ಜೋಶಿ, ನಿರ್ಮಲಾ ಸೀತಾರಾಮನ್ ಮತ್ತು ಜೆಡಿಎಸ್‌ನ ಎಚ್.ಡಿ. ಕುಮಾರಸ್ವಾಮಿ ಅವರು ಆಯ್ಕೆಯಾಗಿದ್ದಾರೆ. ಇನ್ನು ಶೋಭಾ ಕರಂದ್ಲಾಜೆ ಮತ್ತು ವಿ.ಸೋಮಣ್ಣ ಅವರಿಗೆ ರಾಜ್ಯ ಖಾತೆ ಸಿಗಲಿದೆ. ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.