11:21 AM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಕೃಪಾಕಟಾಕ್ಷದಡಿಯಲ್ಲೇ ಕರ್ನಾಟಕದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ: ಎಐಸಿಸಿ ವಕ್ತಾರ ಸಪ್ನಾಲ್ ಆರೋಪ

21/04/2023, 20:22

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಕೃಪಾಕಟಾಕ್ಷದಡಿಯಲ್ಲೇ ಕರ್ನಾಟಕದಲ್ಲಿ ಬಿಜೆಪಿ ಸರಕಾರದ ವ್ಯಾಪಕ ಭ್ರಷ್ಟಚಾರ ನಡೆದಿದೆ ಎಂದು ಎಐಸಿಸಿ ವಕ್ತಾರ ಚರಣ್‌ಸಿಂಗ್ ಸಪ್ನಾಲ್ ಆರೋಪಿಸಿದ್ದಾರೆ.
ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಎಂದರೆ ಭ್ರಷ್ಟಚಾರಿ ಜನತಾ ಪಕ್ಷ . ಕರ್ನಾಟಕದ ಬಿಜೆಪಿ ಸರಕಾರ ಶೇ.40 ಕಮಿಷನ್ ಸರಕಾರವೆಂದೇ ದೇಶದಲ್ಲಿ ಕುಖ್ಯಾತಿಯನ್ನು ಪಡೆದಿದೆ. ಕರ್ನಾಟಕದಲ್ಲಿ
ಬಿಜೆಪಿ ಆಡಳಿತದಲ್ಲಿ ಟೆಂಡರ್ ಹಗರಣ, ಪಿಎಸ್‌ಐ ನೇಮಕಾತಿ ಹಗರಣ, ಭೂ ಹಗರಣ, ಕೋವಿಡ್ ಹಗರಣ, ಬಿಟ್‌ಕಾಯಿನ್ ಹಗರಣ ಸೇರಿದಂತೆ
ಹಲವಾರು ಹಗರಣಗಳು ನಡೆದಿವೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಇದರ ಬಗ್ಗೆ ಯಾವುದೇ ಚಕಾರವೆತ್ತಿಲ್ಲ. ನರೇಂದ್ರ ಮೋದಿಯವರು ಕೆ.ಎಸ್.ಈಶ್ವರಪ್ಪ ಅವರಿಗೆ ಕರೆ ಮಾಡಿ ಶ್ಲಾಘನೆ ವ್ಯಕ್ತಪಡಿಸಿರುವ ವರದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈಶ್ವರಪ್ಪ ಅವರ ಮೇಲೆ ಅವರದ್ದೇ ಪಕ್ಷದ ಕಾರ್ಯಕರ್ತ ಸಂತೋಷ್ ಎಂಬವರು ಭ್ರಷ್ಟಚಾರದ ಆರೋಪ ಮಾಡಿ ಸಾವಿಗೆ ಶರಣಾಗಿದ್ದರು.ಮೋದಿಯವರು ಆಗ ಸಂತೋಷ್ ಕುಟುಂಬಕ್ಕೆ ಕರೆ ಮಾಡಿ ಸಾಂತ್ವನ ಹೇಳುವ ಕಾರ್ಯ ಮಾಡಲಿಲ್ಲ. ಮೋದಿಯವರ ನಡೆ ಭ್ರಷ್ಟಚಾರಕ್ಕೆ ಅಧಿಕೃತ ಮುದ್ರೆಯೊತ್ತಿದಂತಾಗಿದೆ ಎಂದವರು ಆರೋಪಿಸಿದರು.
ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮೂಡುಬಿದಿರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ, ಮುಖಂಡರಾದ ಎ.ಸಿ.ವಿನಯರಾಜ್,
ಸಂತೋಷ್ ಕುಮಾರ್ ಶೆಟ್ಟಿ, ನೀರಜ್‌ಪಾಲ್,ವಸಂತ ಬೆನಾರ್ಡ್,ಶುಬೋಧಯ ಆಳ್ವ, ಶಾಲೆಟ್ ಪಿಂಟೋ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು