2:03 AM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಮೋದಿ ಸರಕಾರಕ್ಕೆ 8ನೇ ವರ್ಷಾಚರಣೆ:  ಮೇ 30ರಿಂದ ಜೂನ್ 14ವರೆಗೆ ಬಿಜೆಪಿಯಿಂದ ಬೃಹತ್‌ ಪ್ರಚಾರಾಂದೋಲನ

29/05/2022, 12:17

ಹೊಸದಿಲ್ಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 8ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಬಿಜೆಪಿಯು ಮೇ 30ರಿಂದ ಜೂನ್‌ 14ರ ವರೆಗೆ ದೇಶದಾದ್ಯಂತ ಬೃಹತ್‌ ಪ್ರಚಾರಾಂದೋಲನ ಹಮ್ಮಿಕೊಂಡಿದೆ.

ಈ ಕುರಿತು  ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್, ಈ ಕಾರ್ಯಕ್ರಮದಲ್ಲಿ ಕೇಂದ್ರದ ಎಲ್ಲ ಸಚಿವರು, ಬಿಜೆಪಿ ನೇತೃತ್ವದ ರಾಜ್ಯಗಳ ಮಂತ್ರಿಗಳು, ಪಕ್ಷದ ಚುನಾಯಿತ ಪ್ರತಿನಿಧಿಗಳು ಪಾಲ್ಗೊಳ್ಳುವರು. ಬಡವರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳು ಹಾಗೂ ಉತ್ತಮ ಆಡಳಿತದ ಬಗ್ಗೆ ಜನರಿಗೆ ಮಾಹಿತಿ ನೀಡುವರು ಎಂದರು.

ಮೇ 30ರಂದು ಕೋವಿಡ್‌ನಿಂದಾಗಿ ಅನಾಥರಾಗಿರುವ ಮಕ್ಕಳಿಗೆ ಪ್ರಧಾನಿ ಮೋದಿ ಅವರು ಪರಿಹಾರ ಧನದ ಚೆಕ್‌ಗಳನ್ನು ವಿತರಿಸುವರು. ಅವರಿಗೆ ವಿದ್ಯಾರ್ಥಿವೇತನವನ್ನು ಅದೇ ದಿನ ಘೋಷಿಸುವರು ಎಂದು ತಿಳಿಸಿದರು.

‘ಸೇವೆ, ಉತ್ತಮ ಆಡಳಿತ, ಬಡವರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಕಾರ್ಯಕ್ರಮಗಳು ಮೋದಿ ನೇತೃತ್ವದ ಸರ್ಕಾರದ ಆದ್ಯತೆಗಳಾಗಿವೆ. ಈ ಬಗ್ಗೆ ದೇಶದ ಪ್ರತಿ ಪ್ರಜೆಗೂ ಮಾಹಿತಿ ನೀಡಲು ಪ್ರಚಾರಾಂದೋಲನ ವೇಳೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಇದಕ್ಕಾಗಿ ಈ ಅವಧಿಯಲ್ಲಿ ಬೂತ್‌ನಿಂದ ರಾಷ್ಟ್ರ ಮಟ್ಟದ ವರೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು  ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು