3:35 AM Friday10 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಮೊಹರಂ ಹಬ್ಬವನ್ನು ಹಿಂದೂ–ಮುಸ್ಲಿಮರು ಶಾಂತಿ-ಸೌಹಾರ್ದದಿಂದ ಆಚರಿಸಬೇಕು: ಶಾಂತಿ ಸಭೆಯಲ್ಲಿ ಪಿಎಸ್ಐ ಸಂಜಯ್ ತಿಪ್ಪಾರೆಡ್ಡಿ

14/07/2024, 15:29

ಶಿವು ರಾಠೋಡ ಮುದ್ದೇಬಿಹಾಳ ವಿಜಯಪುರ

info.reporterkarnataka@gmail.com

ಮೊಹರಂ ಹಬ್ಬವನ್ನು ಹಿಂದೂ–ಮುಸ್ಲಿಮರು ಒಟ್ಟಿಗೆ ಶಾಂತಿ-ಸೌಹಾರ್ದದಿಂದ ಆಚರಿಸಬೇಕೆಂದು ಪಿಎಸ್ಐ ಸಂಜಯ್ ತಿಪ್ಪಾರೆಡ್ಡಿ ಹೇಳಿದರು.
ಇಲ್ಲಿನ ಹೊರ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆದ ಮೊಹರಂ ಶಾಂತಿ ಸಭೆಯಲ್ಲಿ ಮಾತನಾಡಿದರು.
ನೂರಾರೂ ವರ್ಷಗಳಿಂದ ಸೌಹಾರ್ದದ ಪ್ರತೀಕವಾದ ನಾಲತವಾಡದಲ್ಲಿ ಮುಂದೆಯೂ ಪರಸ್ಪರ ಸಹಕಾರ ಹಾಗೂ ಸೌಹಾರ್ದದಿಂದ ಪ್ರತಿಯೊಬ್ಬರೂ ಹಬ್ಬ ಆಚರಿಸಬೇಕು. ಮೊಹರಂ ಹಬ್ಬದಲ್ಲಿ ಶಾಂತಿಗೆ ಭಂಗ ಬಾರದಂತೆ ಎಚ್ಚರಿಕೆ ವಹಿಸಬೇಕೆಂದರು,
ಕಿಡಿಗೇಡಿಗಳ ಕೃತ್ಯಕ್ಕೆ ಕಡಿವಾಣ ಹಾಕಿ, ಶಾಂತಿ ಕಾಪಾಡುವ ಅಗತ್ಯವಿದೆ. ವದಂತಿಗಳಿಗೆ ಕಿವಿಗೊಡದೆ ಸಾಮರಸ್ಯದಿಂದ ಹಬ್ಬ ಆಚರಿಸಿ ಎಂದರು.

ಹಬ್ಬದ ದಿನದಂದು ನಮ್ಮ ಇಲಾಖೆಯಿಂದ ಸೂಕ್ತ ಬಂದೋ ಬಸ್ತ್ ಒದಗಿಸುವ ಎಲ್ಲಾ ಕ್ರಮ ಕೈಗೊಳ್ಳುತ್ತೇವೆ ಎಂದರು.
ಈ ವೇಳೆ ಪ್ರಮುಖರಾದ ಬಾಲಚಂದ್ರ ಗದಗಿನ ಮಾತನಾಡಿದರು.
ಸಭೆಯಲ್ಲಿ ಮುಖ್ಯ ಪೇದೆ, ಪಿ.ಎಸ್.ಪಾಟೀಲ, ಹನಮಂತ ಹೆಬ್ಬುಲಿ, ಬಸವರಾಜ ಹಿಪ್ಪರಗಿ, ಬಸವರಾಜ ಚಿಂಚೋಳಿ, ಚಿದಾನಂದ, ಮತ್ತು ಸಿಕ್ಕಲಗಾರ, ಅವಟಿ, ಖಾಜಿ, ಹವೇಲಿ, ನಾಡಗೌಡ, ಬಾರಪೇಟ, ತಳಗಿನ ಮಸೀದ್, ಜಾಲಗಾರ ಓಣಿಯ ಮಸೀದಿಯ ಪ್ರಮುಖರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು