10:03 PM Sunday27 - July 2025
ಬ್ರೇಕಿಂಗ್ ನ್ಯೂಸ್
Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ…

ಇತ್ತೀಚಿನ ಸುದ್ದಿ

ಮಂಕಿಪಾಕ್ಸ್‌ ಭೀತಿ: ಮಂಗಳೂರು ಸಹಿತ ರಾಜ್ಯದ ಎಲ್ಲ ವಿಮಾಣ ನಿಲ್ದಾಣಗಳಲ್ಲಿ ಕಟ್ಟೆಚ್ಚರ; ಕಡ್ಡಾಯ ಪರೀಕ್ಷೆ

25/07/2022, 00:22

ಬೆಂಗಳೂರು(reporterkarnataka.com): ಮಂಕಿಪಾಕ್ಸ್‌ ಸೋಂಕು ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ ಎಲ್ಲ ಏರ್ಪೋರ್ಟ್ ಗಳಲ್ಲಿ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದ್ದು, ಸೋಂಕಿನ ಲಕ್ಷಣ ಹೊಂದಿರುವ ಪ್ರಯಾಣಿಕರನ್ನು ಕಡ್ಡಾಯ ಪರೀಕ್ಷೆಗೆ ಒಳಪಡಿಸಲು ಆರೋಗ್ಯ ಇಲಾಖೆ ಸೂಚಿಸಿದೆ.

ಈ ಕುರಿತು ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ಹೇಳಿದ್ದು, ವಿಶ್ವ ಆರೋಗ್ಯ ಸಂಸ್ಥೆಯು ಮಂಕಿಪಾಕ್ಸ್‌ ಹೆಚ್ಚಳ ಹಿನ್ನೆಲೆ ಸಾರ್ವಜನಿಕ ಆರೋಗ್ಯ ತುರ್ತುಪರಿಸ್ಥಿತಿ ಎಂದು ಘೋಷಿಸಿದೆ. ಅಲ್ಲದೆ, ನೆರೆಯ ರಾಜ್ಯವಾದ ಕೇರಳದಲ್ಲಿ ಮಂಕಿಪಾಕ್ಸ್‌ ಪ್ರಕರಣ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸು ಆಧರಿಸಿ ಆರೋಗ್ಯ ಇಲಾಖೆಯು ರಾಜ್ಯದಲ್ಲಿ ಸೋಂಕು ಹರಡದಂತೆ ತಡೆಗಟ್ಟಲು ಮತ್ತು ನಿರ್ವಹಣೆಗೆ ಮಾರ್ಗಸೂಚಿ ಸಿದ್ಧಪಡಿಸಿ ಜಿಲ್ಲಾಡಳಿತಗಳಿಗೆ ನೀಡಲಾಗಿದೆ’ ಎಂದು ತಿಳಿಸಿದ್ದಾರೆ.

ಪ್ರಮುಖವಾಗಿ ಮಾರ್ಗಸೂಚಿಯಲ್ಲಿ, ಬೆಂಗಳೂರು ಮತ್ತು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಂಕಿಪಾಕ್ಸ್‌ ತಪಾಸಣೆಗೆ ಅಗತ್ಯ ಕ್ರಮ ವಹಿಸಬೇಕು. ನಿಲ್ದಾಣಕ್ಕೆ ಬರುವ ಪ್ರಯಾಣಿಕರಲ್ಲಿ ಯಾರಿಗಾದರೂ ಜ್ವರ, ಚಳಿ ಮತ್ತು ಬೆವರುವಿಕೆ, ಗ್ರಂಥಿಗಳ ಊತ, ತಲೆನೋವು, ಮೈಕೈನೋವು, ಸುಸ್ತು, ಗಂಟಲು ಉರಿ, ಕೆಮ್ಮು, ಚರ್ಮಮೇಲಿನ ದದ್ದುಗಳು ಕಂಡುಬಂದರೆ ಅವರನ್ನು ಕೂಡಲೇ ಪ್ರಾಥಮಿಕ ಪರೀಕ್ಷೆಗೊಳಪಡಿಸಿ, ಪ್ರತ್ಯೇಕವಾಗಿರಿಸಿ, ಅವರ ಸೋಂಕು ಪರೀಕ್ಷೆಗೆ ಕ್ರಮಕೈಗೊಳ್ಳಬೇಕು.

ಸೋಂಕಿತರನ್ನು ಬೆಂಗಳೂರಿನಲ್ಲಿ ಇಂದಿರಾ ನಗರದಲ್ಲಿರುವ ಸಾಂಕ್ರಾಮಿಕ ರೋಗಗಳ ಆಸ್ಪತ್ರೆ, ಮಂಗಳೂರಿನಲ್ಲಿ ವೆನ್‌ಲಾಕ್‌ ಜಿಲ್ಲಾ ಆಸ್ಪತ್ರೆಗಳಲ್ಲಿ ದಾಖಲಿಸಬೇಕು. ಸೋಂಕು ದೃಢಪಟ್ಟರೆ ಮಾತ್ರ ಅಲ್ಲಿಯೇ 21 ದಿನ ಚಿಕಿತ್ಸೆ ನೀಡಬೇಕು ಎಂದು ಸೂಚಿಸಲಾಗಿದೆ.

ಮಂಕಿಪಾಕ್ಸ್‌ ಸೋಂಕು ಲಕ್ಷಣ ಇದ್ದವರಲ್ಲಿ ದದ್ದುಗಳಿಲ್ಲದಿದ್ದರೆ ರಕ್ತ, ಸೀರಂ, ಗಂಟಲು/ಮೂಗಿನ ದ್ರವ, ಮೂತ್ರದ ಮಾದರಿ ಸಂಗ್ರಹಿಸಬೇಕು. ಒಂದು ವೇಳೆ ದದ್ದುಗಳಿದ್ದರೆ ಅಂತಹವರಿಂದ ಹೆಚ್ಚುವರಿಯಾಗಿ ದ್ರವ, ಗಾಯಗಳ ದ್ರವ ಮಾದರಿಯನ್ನು ಸಂಗ್ರಹಿಸಬೇಕು. ಪರೀಕ್ಷೆಗೆಂದು ಬೆಂಗಳೂರಿನ ರಾಷ್ಟ್ರೀಯಾ ವೈರಾಣು ಸಂಸ್ಥೆ ಅಥವಾ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಬೇಕು. ತಪಾಸಣೆ ನಡೆಸುವ ಸಂದರ್ಭದಲ್ಲಿ ಕೊರೋನಾ ಪರೀಕ್ಷೆಯಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಬ್ಬಂದಿಗೆ ತಿಳಿಸಲಾಗಿದೆ.

ಪ್ರಯಾಣ ಸಂದರ್ಭದಲ್ಲಿ ಅಥವಾ ಪ್ರಯಾಣಿಕರ ಪೈಕಿ ಯಾರಿಗಾದರು ಸೋಂಕಿನ ಲಕ್ಷಣಗಳು ಕಂಡುಬಂದರೆ ಸ್ವಯಂ ಪ್ರೇರಿತವಾಗಿ ನಿಲ್ದಾಣದ ಅಧಿಕಾರಿಗಳ ಗಮನಕ್ಕೆ ತರಬೇಕು. ಲಕ್ಷಣ ರಹಿತ ಪ್ರಯಾಣಿಕರು ಮುಂದಿನ 21 ದಿನ ನಿಗಾದಲ್ಲಿದ್ದು, ಒಂದು ವೇಳೆ ಲಕ್ಷಣಗಳು ಕಂಡುಬಂದರೆ ಸಮೀಪದ ಜಿಲ್ಲಾಸ್ಪತ್ರೆಗೆ ತೆರಳಬೇಕು ಎಂದು ಸಲಹೆ ನೀಡಲಾಗಿದೆ.

ಗಡಿಯಲ್ಲಿರುವ ರಾಜ್ಯ ಪ್ರವೇಶ ಸ್ಥಳಗಳಲ್ಲಿ ಶಂಕಿತರ ಪತ್ತೆಗೆ ಆರೋಗ್ಯ ತಪಾಸಣಾ ತಂಡಗಳನ್ನು ನೇಮಿಸಬೇಕು. ಜತೆಗೆ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆರೋಗ್ಯ ಕಾರ್ಯಕರ್ತರು ಶಂಕಿತ ಪ್ರಕರಣಗಳನ್ನು ಗುರುತಿಸಲು ಸೂಚಿಸಬೇಕು. ಶಂಕಿತರ ಪ್ರಕರಣಗಳ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಬೇಕು. ಈ ನಿಟ್ಟಿನಲ್ಲಿ ಅವೆಲ್ಲರಿಗೂ ಅಗತ್ಯ ತರಬೇತಿಯನ್ನು ನೀಡಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು