8:57 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ನಾಪೋಕ್ಲುವಿನಲ್ಲಿ ಒಂದು ತಿಂಗಳ ಹಾಕಿ ಹಬ್ಬ: ಕೊಡವ ಕೌಟುಂಬಿಕ ಹಾಕಿ ಉತ್ಸವ ಚೇನಂಡ ಕಪ್ ಪಂದ್ಯಾವಳಿಗೆ ಚಾಲನೆ

05/04/2026, 20:20

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡವ ಕುಟುಂಬಗಳ ನಡುವಿನ ವಾರ್ಷಿಕ ಹಾಕಿ ಪಂದ್ಯಾವಳಿ 2026-27 ರ ಉದ್ಘಾಟನೆ ಕಾರ್ಯಕ್ರಮ ಇಂದು ನಾಪೋಕ್ಲುವಿನಲ್ಲಿ ಜರುಗಿತು.
ಈ ಬಾರಿಯ ಕೊಡವ ಕೌಟುಂಬಿಕ ಹಾಕಿ ಉತ್ಸವದ ಆತಿಥ್ಯವನ್ನು ಚೇನಂಡ ಕುಟುಂಬಸ್ಥರು ವಹಿಸಿಕೊಂಡಿದ್ದು, ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಉದ್ಘಾಟನೆ ನೆರವೇರಿಸಿದರು.
ಒಂದು ತಿಂಗಳ ಅವಧಿಗೆ ನಿರಂತರವಾಗಿ ನಡೆಯುವ ಈ ಪಂದ್ಯಾವಳಿಯನ್ನು ಉದ್ಘಾಟಿಸಿ ಶುಭ ಕೋರುತ್ತಾ ಮಾತನಾಡಿದ ಶಾಸಕ ಎ.ಎಸ್. ಪೊನ್ನಣ್ಣ ನಾಡಿನಾದ್ಯಂತ ಮಾತ್ರವಲ್ಲದೆ ದೇಶ ವಿದೇಶಗಳನ್ನು ಪ್ರಸಿದ್ಧಿ ಪಡೆದಿರುವ ಹಾಗೂ ಈ ಹಿಂದೆ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದಿರುವ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಉತ್ಸವ ಸುಸುತ್ರವಾಗಿ ನಡೆದು ಯಶಸ್ಸು ಕಾಣಲಿ ಎಂದು ಹಾರೈಸಿದರು.
ಕೊಡಗು ಜಿಲ್ಲೆಯಲ್ಲಿ ಅದರಲ್ಲೂ ವಿಶೇಷವಾಗಿ ಕೊಡವ ಕುಟುಂಬದವರು ಸೇನೆ ಕ್ರೀಡೆ ಹಾಗೂ ಎಲ್ಲಾ ಕ್ಷೇತ್ರಗಳಲ್ಲೂ ಪ್ರಪಂಚದಾದ್ಯಂತ ಉತ್ತಮ ಹೆಸರುಗಳಿಸಿದ್ದು, ಈ ಕೌಟುಂಬಿಕ ಪಂದ್ಯಾವಳಿಯು ಜಗತ್ತಿಗೆ ಮತ್ತಷ್ಟು ಹಾಕಿ ಪ್ರತಿಭೆಗಳನ್ನು ನೀಡುವಂತಾಗಲಿ ಎಂದು ಹಾರೈಸಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರು ಚೆಪ್ಪುಡೀರ ಅರುಣ್ ಮಾಚಯ್ಯ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಪಟ್ಟೆದರ್ ಬಿ ಬೋಪಣ್ಣ, ಚೇಂನಂಡ ಹಾಕಿ ನಮ್ಮೆರ ಅಧ್ಯಕ್ಷರು ಪಿ ಕರುಂಬಯ್ಯ, ಕಾರ್ಯಾಧ್ಯಕ್ಷರಾದ ಡೀನಾ ಚೆಂಗಪ್ಪ, ಸದಸ್ಯರು, ನಿರ್ದೇಶಕರು ಹಾಗೂ ಆಡಳಿತ ಮಂಡಳಿ,ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷರು ಪಾಂಡಾಂಡ ಬೋಪಣ್ಣ, ಒಲಂಪಿಯನ್ ಪೂಣಚ್ಚ, ನಿರ್ದೇಶಕರು ಕಲಿಯಂಡ ಸಂಪನ್ ಅಯ್ಯಪ್ಪ, ಬಾಚಮಾಂಡ ಲವ ಚಿಣ್ಣಪ್ಪ, ಕುಶಾಲಪ್ಪ, ಅಜ್ಜಿಕುಟ್ಟಿರ ಪೊನ್ನು, ಮುತ್ತಪ್ಪ, ದಯಾ ಚಿಣ್ಣಪ್ಪ, ಮಿಥುನ್ ಮಾಚಯ್ಯ, ಸೂರಜ್ ಹೊಸೂರು,ಕುಂಡಚ್ಚಿರ ಮಂಜು ದೇವಯ್ಯ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು