8:47 AM Friday23 - January 2026
ಬ್ರೇಕಿಂಗ್ ನ್ಯೂಸ್
ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:…

ಇತ್ತೀಚಿನ ಸುದ್ದಿ

ಮುಡಾ ಹಗರಣದ ರೀತಿಯಲ್ಲೇ ವಕ್ಫ್ ಹಗರಣ ಬಯಲಿಗೆಳೆಯುತ್ತೇವೆ: ಬಿಜೆಪಿ ಮಾಜಿ ಶಾಸಕ ಹರ್ಷವರ್ಧನ್

02/11/2024, 16:21

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮುಡಾ ಹಗರಣದ ರೀತಿಯಲ್ಲಿಯೇ ವಕ್ಫ್ ಹಗರಣವನ್ನು ಬಯಲಿಗೆಳೆಯುವ ಉದ್ದೇಶದಿಂದ ಇಡೀ ರಾಜ್ಯಾದ್ಯಂತ ನವೆಂಬರ್ 4ರಂದು ಬಿಜೆಪಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಹರ್ಷವರ್ಧನ್ ಹೇಳಿದರು.
ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ತಲತಲಾಂತರ ದಿಂದ ಕೆಲವು ರೈತರು ಉಳುಮೆ ಮಾಡಿಕೊಂಡು ಬರುತ್ತಿರುವ ಜಮೀನುಗಳನ್ನು ಹಾಗೂ ದೇವಾಲಯ ಮತ್ತು ಮಠಮಾನ್ಯಗಳಿಗೆ ಸೇರಿದ ಸಾವಿರಾರು ಎಕರೆ ಜಮೀನುಗಳಿಗೂ ಸಹ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಗೊಂದಲ ಸೃಷ್ಟಿ ಮಾಡುತ್ತಿದೆ ಎಂದರು.
ಇದೊಂದು ಅಲ್ಪಸಂಖ್ಯಾತರನ್ನು ಓಲೈಸುವ ಆತಂಕಕಾರಿ ಬೆಳವಣಿಗೆಯಾಗಿದೆ. ಹಾಗಂತ ನಾವು ಅಲ್ಪಸಂಖ್ಯಾತರ ವಿರೋಧಿಯಲ್ಲ. ಆದರೆ ಇದರಿಂದ ನಮ್ಮ ರೈತರಿಗೆ ಅನ್ಯಾಯವಾಗುತ್ತಿರುವುದನ್ನು ನಾವು ಸಹಿಸುವುದಿಲ್ಲ. ವಕ್ಫ್ ಹೆಸರಿನಲ್ಲಿ ರೈತರನ್ನು ಒಕ್ಕಲೆ ಬ್ಬಿಸುವುದಕ್ಕೆ ನಾವು ಬಿಡುವುದಿಲ್ಲ ಎಂದು ಎಚ್ಚರಿಸಿದರು.
ರೈತ ಬಾಂಧವರು ಯಾರು ವಿಚಲಿತರಾಗದೆ ಅಂತಹ ಅನ್ಯಾಯಕ್ಕೆ ಒಳಗಾದ ರೈತರು ನಮ್ಮ ಬಳಿ ಬನ್ನಿ. ಇದರ ವಿರುದ್ಧ ಹೋರಾಟ ಮಾಡುವುದಾಗಿ ರೈತ ಬಾಂಧವರಿಗೆ ಕರೆ ನೀಡಿದರು.
ನಮ್ಮ ಪಕ್ಷ ಸಿಎಂ ಮೂಡಾ ಹಗರಣವನ್ನು ಬಯಲಿಗೆಳೆದ ಕಾರಣ ಇಂದು ಸಿಎಂ ಕುರ್ಚಿ ಅಲುಗಾಡುತ್ತಿದೆ. ಉಪ ಚುನಾವಣೆ ಮುಗಿದ ಬಳಿಕ ಸಿಎಂ ರಾಜೀನಾಮೆಯನ್ನೂ ನೀಡುತ್ತಾರೆ ಎಂದು ತಿಳಿಸುತ್ತಾ ಅದೇ ರೀತಿ ವಕ್ಫ್ ಹಗರಣವನ್ನು ಬಯಲಿ ಗೆಳೆಯಲಾಗುತ್ತದೆ ಎಂದರು.

ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಕೆಂಡಗಣ್ಣಪ್ಪ ಹಾಗೂ ರೈತ ಮೋರ್ಚ ಅಧ್ಯಕ್ಷ ಮಹೇಶ್ ಬಾಬು ಮಾತನಾಡಿ, ಘಟನೆಯ ಬಗ್ಗೆ ವಿವರಿಸಿದರು.
ಗೋಷ್ಠಿಯಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಸಿದ್ದರಾಜು, ನಗರಸಭಾ ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ಮುಖಂಡರುಗಳಾದ ಶ್ರೀನಿವಾಸ ರೆಡ್ಡಿ, ಪುಟ್ಟಸ್ವಾಮಿ, ಸಿದ್ದರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು