3:57 PM Wednesday25 - February 2026
ಬ್ರೇಕಿಂಗ್ ನ್ಯೂಸ್
ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ

ಇತ್ತೀಚಿನ ಸುದ್ದಿ

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪುನರುಚ್ಚಾರ

07/02/2025, 20:33

ಬೆಂಗಳೂರು(reporterkarnataka.com): ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ಮತ್ತು ಇಡಿ ತನಿಖೆ ನಡೆಯುತ್ತಿದ್ದು, ಸದ್ಯಕ್ಕೆ ಸಿದ್ದರಾಮಯ್ಯನವರಿಗೂ ಸ್ವಲ್ಪ ರಿಲೀಫ್ ಸಿಕ್ಕಿದೆ. ಅಲ್ಲದೇ ಲೂಟಿಯಾಗಿರುವ ರಾಜ್ಯದ ಜನತೆಯ ದುಡ್ಡು ಮತ್ತೆ ಖಜಾನೆಗೆ ವಾಪಸ್ ಬರುತ್ತದೆ ಎಂಬ ವಿಶ್ವಾಸ ಇದೆ. ಹೈಕೋರ್ಟ್ ಆದೇಶವನ್ನು ನಾವು ಒಪ್ಪಲೇಬೇಕಾಗುತ್ತದೆ. ಸಿದ್ದರಾಮಯ್ಯ ವಿಚಾರದಲ್ಲಿ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ತಿಳಿಸಿದರು.
ಕಾಂಗ್ರೆಸ್‌ ಆಡಳಿತದ 20 ತಿಂಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಇದನ್ನು ಕಾಂಗ್ರೆಸ್ ಶಾಸಕರೇ ಒಪ್ಪಿಕೊಂಡಿದ್ದಾರೆ. ರಾಜ್ಯ ಸುಭದ್ರವಾಗಿರಬೇಕಾದರೆ ಕಾನೂನು ಸುವ್ಯವಸ್ಥೆ ಸರಿಯಾಗಿರಬೇಕು. ಆದರೆ ರಾಜ್ಯದಲ್ಲಿ ಬ್ಯಾಂಕ್ ದರೋಡೆಗಳು, ಗೋವುಗಳ ಕೆಚ್ಚಲು ಕೊಯ್ಯುವುದು, ಹೊಟ್ಟೆ ಸೀಳುವುದು, ಅತ್ಯಾಚಾರ ಪ್ರಕರಣ ಹೆಚ್ಚಾಗುತ್ತಿವೆ. ಕಾನೂನು ಸುವವ್ಯಸ್ಥೆ ಹದಗೆಟ್ಟು ಹೋಗಿದೆ. ಬೆಳಗಾವಿಯಲ್ಲಿ ಅಷ್ಟು ದೊಡ್ಡ ಅಧಿವೇಶನ ಮಾಡಲು ದುಡ್ಡು ಎಲ್ಲಿಂದ ಬಂತು? ಬ್ಯಾನರ್‌, ಬಸ್‌, ಊಟಕ್ಕೆ ದುಡ್ಡು ಎಲ್ಲಿಂದ? 60 ಪರ್ಸೆಂಟ್ ಕಮಿಷನ್ ಪಡೆದಿರುವುದನ್ನು ಸರ್ಕಾರ ಅಧಿವೇಶನಕ್ಕೆ ಬಳಕೆ ಮಾಡಿದೆ. ಆರು ತಿಂಗಳಿಗೊಮ್ಮೆ ಬಜೆಟ್ ಮಾಡಿ ಮತ್ತೆ ಬೆಲೆ ಏರಿಕೆ ಮಾಡುತ್ತಾರೆ ಎಂದು ದೂರಿದರು.
ಬಿಜೆಪಿ ಅವಧಿಯಲ್ಲಿ 25 ಸಾವಿರ ಕೋಟಿಯಷ್ಟು ಸಾಲ ಪಡೆಯಲು ಅವಕಾಶ ಇದ್ದರೂ ಜನರ ಮೇಲೆ ಹೊರೆ ಬರಬಾರದು ಎಂದು ಸಾಲ ತೆಗೆದುಕೊಂಡಿಲ್ಲ. ಆದರೆ ಇವರು ಸಾಲಗಾರರ ರಾಜ್ಯ ಮಾಡಲು ಹೊರಟಿದ್ದಾರೆ. ಹೀಗೆ ಮಾಡಿದರೆ ಕೇರಳದಂತೆ ಭಿಕ್ಷೆ ಬೇಡುವ ಸ್ಥಿತಿ ರಾಜ್ಯಕ್ಕೆ ಬರಲಿದೆ. ಸಿಎಂ ಸಿದ್ದರಾಮಯ್ಯ ನವೆಂಬರ್‌ನಲ್ಲಿ ಸಿಎಂ ಸ್ಥಾನ ಬಿಡಬೇಕಾಗಬಹುದು. ಹಾಗಾಗಿ ಅವರಿಗೂ ಆಸಕ್ತಿ ಇಲ್ಲ. ಆಡಳಿತ ಪಕ್ಷ ಅಧ್ವಾನವಾದರೆ ಅಭಿವೃದ್ಧಿ ಕುಂಠಿತವಾಗುತ್ತದೆ ಎಂದರು.
ಪಕ್ಷದ ಆಂತರಿಕ ವಿಚಾರವನ್ನು ನಾಲ್ಕು ಗೋಡೆಗಳ ಮಧ್ಯೆ ಮಾತಾಡಬೇಕು. ನಾವೆಲ್ಲರೂ ಒಟ್ಟಿಗೆ ಹೋರಾಟ ಮಾಡಿದರೆ ಕಾಂಗ್ರೆಸ್ ಸರ್ಕಾರವನ್ನು ಬಗ್ಗು ಬಡಿಯಬಹುದಾಗಿತ್ತು. ಹದಿನೈದು-ಇಪ್ಪತ್ತು ದಿನಗಳಲ್ಲಿ ಇದಕ್ಕೆ ಅಂತಿಮ ತೀರ್ಮಾನವನ್ನು ಕೇಂದ್ರದ ನಾಯಕರು ಕೊಡುತ್ತಾರೆ. ಒಟ್ಟಾಗಿ ಹೋಗಬೇಕು ಎನ್ನುವುದು ನನ್ನ ಅಭಿಪ್ರಾಯ. ಕೆಲವು ಸಲ ಪ್ರಜಾಪ್ರಭುತ್ವದ ಮಾತಿನ ಸ್ವಾತಂತ್ರ್ಯದಲ್ಲಿ ಎಲ್ಲರೂ ಮಾತಾಡಲು ಶುರು ಮಾಡುತ್ತಾರೆ. ಪ್ರಾರಂಭದಲ್ಲೇ ಇದು ಕಡಿಮೆ ಆಗಿರುತ್ತಿದ್ದರೆ ಒಳ್ಳೆಯದಿತ್ತು. ಸರಿ ಪಡಿಸಿಕೊಂಡು ಹೋಗುವುದೇ ದೊಡ್ಡ ಗುಣ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು