5:27 PM Monday26 - January 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ

ಇತ್ತೀಚಿನ ಸುದ್ದಿ

ಮುಡಾ ಕುರಿತು ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ

20/01/2025, 19:52

ಬೆಂಗಳೂರು(reporterkarnataka.com): ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಡಾ ಹಗರಣದ ಬಗ್ಗೆ ಇಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇಡಿಯವರ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದರು.
*ಹಣ ದುರುಪಯೋಗದ ಪ್ರಶ್ನೆ ಇಲ್ಲ:* ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದ ಪ್ರತಿಪಕ್ಷಗಳ ಆರೋಪ ಹಾಗೂ ರಾಜ್ಯದ ತೆರಿಗೆ ಹಣದಲ್ಲಿ ನಾಳಿನ ಸಮಾರಂಭ ನಡೆಸುತ್ತಿರುವ ಬಗ್ಗೆ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಣ ದುರುಪಯೋಗ ಆಗಿರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
*ತಪ್ಪಿತಸ್ಥರ ವಿರುದ್ಧ ಕ್ರಮ:*
ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ‍್ಳಲಾಗುವುದು ಎಂದರು.

*ಮೈಕ್ರೋ ಫೈನಾನ್ಸ್ ದಂಧೆ- ಕಾನೂನು ರೀತ್ಯ ಕ್ರಮ:*
ಮೈಸೂರು ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು, ಜನರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ, ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ದಂಧೆ ನಡೆಸುತ್ತಿರುವ ಸಂಸ್ಥೆಯ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
1924ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಮಹಾತ್ಮಾ ಗಾಂಧೀಜಿ ಪ್ರತಿಮೆ ಅನಾವರಣ ನಂತರ ಸಾರ್ವಜನಿಕ ಸಭೆ ನಡೆಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು