ಇತ್ತೀಚಿನ ಸುದ್ದಿ
ಮುಡಾ ಉದ್ಯೋಗಿ ನೇಣಿಗೆ ಶರಣು: ಅನಾರೋಗ್ಯದಿಂದ ಬೇಸೆತ್ತು ಆತ್ಮಹತ್ಯೆ?
02/06/2023, 19:59
ಮಂಗಳೂರು(reporterkarnataka.com): ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಉದ್ಯೋಗಿ ಕೀರ್ತನ್ ಕುಮಾರ್(38) ಶುಕ್ರವಾರ ಕಚೇರಿ ಆವರಣದ ಗೋದಾಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ ಮತ್ತು ಮಗುವನ್ನು ಅಗಲಿದ್ದಾರೆ. ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.