2:04 AM Sunday22 - September 2024
ಬ್ರೇಕಿಂಗ್ ನ್ಯೂಸ್
2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬಾಲಕಿಯರ ಕ್ರೀಡಾ ವಸತಿ ನಿಲಯ ಕಟ್ಟಡ ಉದ್ಘಾಟನೆ ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ

ಇತ್ತೀಚಿನ ಸುದ್ದಿ

ಮೂಡುಬಿದರೆ ಆಳ್ವಾಸ್ ಕಾಲೇಜು ವಿದ್ಯಾರ್ಥಿ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನ: ಮಂಗಳೂರು ಆಸ್ಪತ್ರೆಗೆ ದಾಖಲು

14/09/2021, 17:07

ಮೂಡುಬಿದರೆ(reporterkarnataka.com): ಆಳ್ವಾಸ್ ಕಾಲೇಜಿನ ಪಿಯು ವಿದ್ಯಾರ್ಥಿಯೊಬ್ಬ ಸೋಮವಾರ ರಾತ್ರಿ ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ನಡೆದಿದ್ದು, ವಿದ್ಯಾರ್ಥಿಯನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ.

ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿಯನ್ನು ಬೆಳಗಾವಿ ಮೂಲದ ರಜತ್(18) ಎಂದು ಗುರುತಿಸಲಾಗಿದೆ.

ಆಳ್ವಾಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಾ ಹಾಸ್ಟೆಲ್ ನಲ್ಲಿ ಇದ್ದುಕೊಂಡು ಓದುತ್ತಿದ್ದ. ಸೋಮವಾರ ಮಧ್ಯಾಹ್ನ ಮನೆಯವರಿಗೆ ಫೋನ್ ಮಾಡಿದ್ದು, ಯಾವುದೇ ರೀತಿಯಲ್ಲಿ ಅಸಹನೆ, ನೋವನ್ನು ವ್ಯಕ್ತಪಡಿಸಿರಲಿಲ್ಲ ಎನ್ನಲಾಗಿದೆ. ಆದರೆ, ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿ ಹಾಸ್ಟೆಲ್ ಕಟ್ಟಡದ 5ನೇ ಮಹಡಿಯಿಂದ ಕೆಳಕ್ಕೆ ಹಾರಿದ್ದು, ಘಟನೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ.

ಕೂಡಲೇ ಅಲ್ಲಿನ ಹಾಸ್ಟೆಲ್ ಸಿಬಂದಿ ವಿದ್ಯಾರ್ಥಿಯನ್ನು ಮಂಗಳೂರಿನ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ಮೂಡುಬಿದ್ರೆ ಪೊಲೀಸರು ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿ ಕೋಮಾ ಸ್ಥಿತಿಯಲ್ಲಿದ್ದು, ಆತನಿಂದಲೇ ಮಾಹಿತಿ ಪಡೆಯಬೇಕು ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು