ಇತ್ತೀಚಿನ ಸುದ್ದಿ
ಮೂಡುಬಿದರೆ: ಜುಲೈ 23ರಂದು ‘ಮಂದಾರ ಮಂಥನ’; ತುಳು ವಾಲ್ಮೀಕಿ ಮಂದಾರ ಕೇಶವ ಭಟ್ಟರ ‘ಮಂದಾರ ರಾಮಾಯಣ’ದ ವಾಚನ ಮತ್ತು ವ್ಯಾಖ್ಯಾನ
20/07/2022, 17:51

ಮೂಡುಬಿದರೆ(reporterkarnataka.com): ಮೂಡುಬಿದರೆಯ ಆಳ್ವಾಸ್ ತುಳು ಅಧ್ಯಯನ ಕೇಂದ್ರ ಮತ್ತು ಮಂದಾರ ಪ್ರತಿಷ್ಠಾನದ ಸಹಯೋಗದಲ್ಲಿ ತುಳು ವಾಲ್ಮೀಕಿ, ಮಹಾಕವಿ, ಮಂದಾರ ಕೇಶವ ಭಟ್ಟರ “ಮಂದಾರ ರಾಮಾಯಣ”ದ ವಾಚನ ಮತ್ತು ವ್ಯಾಖ್ಯಾನ -“ಮಂದಾರ ಮಂಥನ” ಕಾರ್ಯಕ್ರಮ ವಿದ್ಯಾಗಿರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಕುವೆಂಪು ಸಭಾಂಗಣದಲ್ಲಿ ಜುಲೈ 23ರಂದು ಅಪರಾಹ್ನ 2 ಗಂಟೆಗೆ ನಡೆಯಲಿದೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಉದ್ಘಾಟನೆ ನೆರವೇರಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಮಂದಾರ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಪ್ರಭಾಕರ ಜೋಶಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಡಾ. ರಾಜೇಶ್ ಆಳ್ವ (ಅಧ್ಯಕ್ಷರು, ತುಳು ವರ್ಲ್ಡ್) ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಕುರಿಯನ್, ಮಂದಾರ ಕೇಶವ ಭಟ್ಟರ ಪುತ್ರಿ ಶಾರದಾಮಣಿ, ಪತ್ರಕರ್ತರಾದ ಡಾ. ರಾಜೇಶ್ ಭಟ್ ಮಂದಾರ ಅವರು ಉಪಸ್ಥಿತರಿರುವರು.
ಮಂದಾರ ರಾಮಾಯಣದ ವಾಚನ- ವ್ಯಾಖ್ಯಾನ ಕಾರ್ಯಕ್ರಮವನ್ನು ಡಾ. ದಿನಕರ ಪಚ್ಚನಾಡಿ, ಶಿವಪ್ರಸಾದ್ ಎಡಪದವು, ಶಾಲಿನಿ ಹೆಬ್ಬಾರ್ ನಡೆಸಿಕೊಡಲಿದ್ದಾರೆ ಎಂದು ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ಸಂಯೋಜಕರಾದ ಡಾ. ಯೋಗೀಶ್ ಕೈರೂಡಿ ಹಾಗೂ ಮಂದಾರ ಪ್ರತಿಷ್ಠಾನದ ಕಾರ್ಯದರ್ಶಿ ಪ್ರಮೋದ್ ಸಪ್ರೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಲಿದ್ದಾರೆ.