11:31 PM Thursday15 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮೂಡುಬಿದರೆ: ಜುಲೈ 23ರಂದು ‘ಮಂದಾರ ಮಂಥನ’; ತುಳು ವಾಲ್ಮೀಕಿ ಮಂದಾರ ಕೇಶವ ಭಟ್ಟರ ‘ಮಂದಾರ ರಾಮಾಯಣ’ದ ವಾಚನ ಮತ್ತು ವ್ಯಾಖ್ಯಾನ

20/07/2022, 17:51

ಮೂಡುಬಿದರೆ(reporterkarnataka.com): ಮೂಡುಬಿದರೆಯ ಆಳ್ವಾಸ್ ತುಳು ಅಧ್ಯಯನ ಕೇಂದ್ರ ಮತ್ತು ಮಂದಾರ ಪ್ರತಿಷ್ಠಾನದ ಸಹಯೋಗದಲ್ಲಿ ತುಳು ವಾಲ್ಮೀಕಿ, ಮಹಾಕವಿ, ಮಂದಾರ ಕೇಶವ ಭಟ್ಟರ “ಮಂದಾರ ರಾಮಾಯಣ”ದ ವಾಚನ ಮತ್ತು ವ್ಯಾಖ್ಯಾನ -“ಮಂದಾರ ಮಂಥನ” ಕಾರ್ಯಕ್ರಮ ವಿದ್ಯಾಗಿರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಕುವೆಂಪು ಸಭಾಂಗಣದಲ್ಲಿ ಜುಲೈ 23ರಂದು ಅಪರಾಹ್ನ 2 ಗಂಟೆಗೆ ನಡೆಯಲಿದೆ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಉದ್ಘಾಟನೆ ನೆರವೇರಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಮಂದಾರ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಪ್ರಭಾಕರ ಜೋಶಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಡಾ. ರಾಜೇಶ್ ಆಳ್ವ (ಅಧ್ಯಕ್ಷರು, ತುಳು ವರ್ಲ್ಡ್) ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಕುರಿಯನ್, ಮಂದಾರ ಕೇಶವ ಭಟ್ಟರ ಪುತ್ರಿ ಶಾರದಾಮಣಿ, ಪತ್ರಕರ್ತರಾದ ಡಾ. ರಾಜೇಶ್ ಭಟ್ ಮಂದಾರ ಅವರು ಉಪಸ್ಥಿತರಿರುವರು.


ಮಂದಾರ ರಾಮಾಯಣದ ವಾಚನ- ವ್ಯಾಖ್ಯಾನ ಕಾರ್ಯಕ್ರಮವನ್ನು ಡಾ. ದಿನಕರ ಪಚ್ಚನಾಡಿ, ಶಿವಪ್ರಸಾದ್ ಎಡಪದವು, ಶಾಲಿನಿ ಹೆಬ್ಬಾರ್ ನಡೆಸಿಕೊಡಲಿದ್ದಾರೆ ಎಂದು ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ಸಂಯೋಜಕರಾದ ಡಾ. ಯೋಗೀಶ್ ಕೈರೂಡಿ ಹಾಗೂ ಮಂದಾರ ಪ್ರತಿಷ್ಠಾನದ ಕಾರ್ಯದರ್ಶಿ ಪ್ರಮೋದ್ ಸಪ್ರೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು