12:22 AM Wednesday30 - September 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಮೂಡಬಿದ್ರೆ: ಅಕ್ರಮ ಜಾನುವಾರ ಸಾಗಾಟ; ಇಬ್ಬರ ಬಂಧನ; ಕಾರು ವಶ

15/05/2026, 20:07

ಮೂಡಬಿದ್ರೆ(reporterkarnataka.com): ಮಾರುತಿ ಬ್ರೀಜಾ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮೂಡಬಿದ್ರೆ ಪೊಲೀಸರು ಮೂಡಬಿದ್ರೆ ಸಮೀಪದ ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಎಂಬಲ್ಲಿ ಬಂಧಿಸಿದ್ದಾರೆ.
ಮೇ 14ರಂದು ಬೆಳ್ಳಿಗ್ಗೆ 7.00 ಗಂಟೆಗೆ ಪಿಎಸ್ ಐ ಕೃಷ್ಣಪ್ಪ ಮತ್ತು ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಬೆಳುವಾಯಿ ಕಡೆಯಿಂದ ಮಾರ್ನಾಡು ಅಳಿಯೂರು ಕಡೆಗೆ ಮಾರುತಿ ಬ್ರೀಜಾ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡಿಕೊಂಡು ಹೋಗುತ್ತಿದ್ದಾರೆ ಎಂಬ ಮಾಹಿತಿಯಂತೆ ಸಿಬ್ಬಂದಿಗಳೊಂದಿಗೆ ಮೂಡಬಿದ್ರೆ ತಾಲೂಕು ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ತಲುಪಿ ವಾಹನ ತಪಾಸಣೆ ಮಾಡುತ್ತಿರುವ ಬೆಳುವಾಯಿ ಕಡೆಯಿಂದ ಬೂದು KA19MK4265 ನೇ ಬಣ್ಣದ ಮಾರುತಿ ಬ್ರೀಜಾ ಕಾರು ಬಂದಿದ್ದು, ನಿಲ್ಲಿಸಲು ಸೂಚನೇ ನೀಡಿದಾಗ ನಿಲ್ಲಿಸದೇ ಮುಂದಕ್ಕೆ ಚಲಾಯಿಸಿಕೊಂಡು ಹೋಗಿರುತ್ತಾರೆ. ನಂತರ ಆ ವಾಹನವನ್ನು ಬೆನ್ನಟ್ಟಿದಾಗ ಸ್ವಲ್ಪ ಮುಂದಕ್ಕೆ ಗುಂಡುಕಲ್ಲು 5 ಸೈಂಟ್ಸ್ ರಸ್ತೆಗೆ ತಿರುಗಿ ಸಾಹುಲ್ ಹಮೀದ್ ಎಂಬುವರ ಮನೆ ಕಂಪೌಂಡ್ ಒಳಭಾಗದಲ್ಲಿ ಬ್ರೀಜಾ ಕಾರನ್ನು ನಿಲ್ಲಿಸಿ ವಾಹನದಲ್ಲಿದ್ದ ಚಾಲಕ ಮೂಡಬಿದ್ರೆ ಠಾಣಾ ಎಂ.ಓ.ಬಿ ಆಗಿರುವ ಹಂಡೇಲಿನ ಮಹಮ್ಮದ್ ಆರೀಪ್ ಮತ್ತು ಆತನ ಸಹಚರ ಗಂಟಾಲಕಟ್ಟೆಯ ಇಮ್ರಾನ್ ಅಲಿಯಾಸ್ ಇಬ್ರಾಹಿಂ ಕಾರಿನಿಂದ ಇಳಿದು ಓಡಿಹೋಗುತ್ತಿದ್ದವರನ್ನು ಸಿಬ್ಬಂದಿಗಳು ಬೆನ್ನಟ್ಟಿ ಹಿಡಿದು ವಿಚಾರಿಸಿ ನಂತರ ಮಾರುತಿ ಬ್ರೀಜಾ ಕಾರನ್ನು ಪರಿಶೀಲಿಸಿದಾಗ ಕಾರಿನ ಹಿಂಬದಿ ಸೀಟ್ ನ್ನು ತೆಗೆದು ಅದರ ಮೇಲೆ ನೀಲಿ ಬಣ್ಣದ ಪ್ಲಾಸ್ಟಿಕ್ ನ್ನು ಹಾಕಿ ಅದರ ಮೇಲೆ 1 ಗಂಡು ಕರುವನ್ನು ಹಿಂಸಾತ್ಮಕವಾಗಿ ಕಾಲು ಮತ್ತು ತಲೆಯನ್ನು ಹಗ್ಗದಿಂದ ಕಟ್ಟಿ ತುಂಬಿಸಿರುವುದು ಕಂಡು ಬಂದಿರುತ್ತದೆ. ಆರೋಪಿಗಳು ಒಂದು ವಾರದಿಂದ ಬೇರೆ ಬೇರೆ ಕಡೆಗಳಿಂದ ದನಗಳನ್ನು ಕಳ್ಳತನ ಮಾಡಿಕೊಂಡು ಬಂದು ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ನಿವಾಸಿ ಸಾಹುಲ್ ಹಮೀದ್ ರವರ ಮನೆಯ ಬಳಿ ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಸಲುವಾಗಿ ಅಥವಾ ದನಗಳನ್ನು ಕಡಿಯಲೆಂದು ಇತರರಿಗೆ ಮಾರಾಟ ಮಾಡುವ ಸಲುವಾಗಿ ಸಂಗ್ರಹಣೆ ಮಾಡಿರುವುದಾಗಿ ತಿಳಿಸಿರುತ್ತಾರೆ. ಆರೋಪಿಗಳು ದನವನ್ನು ಕಳ್ಳತನ ಮಾಡಿಕೊಂಡು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದರಿಂದ ದನವನ್ನು, KA19MK4265 ನೇ ಮಾರುತಿ ಬ್ರೀಜಾ ಕಾರನ್ನು ಮತ್ತು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು